ಮೈಸೂರು ಜಿಲ್ಲಾ ಪಂಚಾಯಿತಿಯಲ್ಲೂ ಕಾಂಗ್ರೆಸ್ - ಜೆಡಿಎಸ್ ಮೈತ್ರಿ

ಮೈಸೂರು ಜಿಲ್ಲಾ ಪಂಚಾಯಿತಿಯಲ್ಲೂ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ನಾಯಕರು ಕೊನೆ ಕ್ಷಣದಲ್ಲಿ ಬಿಜೆಪಿಗೆ ಕೈಕೊಟ್ಟಿದ್ದಾರೆ...
ಮೈಸೂರು ಜಿಲ್ಲಾ ಪಂಚಾಯಿತಿ ಕಾರ್ಯಾಲಯ
ಮೈಸೂರು ಜಿಲ್ಲಾ ಪಂಚಾಯಿತಿ ಕಾರ್ಯಾಲಯ
ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿಯಲ್ಲೂ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ನಾಯಕರು ಕೊನೆ ಕ್ಷಣದಲ್ಲಿ ಬಿಜೆಪಿಗೆ ಕೈಕೊಟ್ಟಿದ್ದಾರೆ. ಇದರೊಂದಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಎಲ್ಲಾ ಲೆಕ್ಕಾಚಾರ ಉಲ್ಟಾಪಲ್ಟಾ ಆಗಿದೆ. 
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆ ಕ್ಷಣದಲ್ಲಿ ದಾಳ ಉರುಳಿಸಿದ ತವರು ಜಿಲ್ಲೆಯಲ್ಲೂ ದೋಸ್ತಿ ಮುಂದುವರೆಯಲಿದೆ. 
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿದ್ದು, ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನ ಒಪ್ಪಿಕೊಂಡಿದೆ.
ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌ ಅವರು ಮೈಸೂರಿನಲ್ಲೂ ಮೈತ್ರಿ ಧರ್ಮ ಪಾಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಸ್ತಾವದಿಂದ ಸ್ಥಳೀಯ ನಾಯಕರು ಹಿಂದೆ ಸರಿದಿದ್ದಾರೆ.
ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಒಪ್ಪಂದ ಏರ್ಪಟ್ಟಿದ್ದು, ಅಧ್ಯಕ್ಷ ಸ್ಥಾನ ಜೆಡಿಎಸ್​ಗೆ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್​ಗೆ ಅನ್ನೋ ಮಾತುಕತೆಯಾಗಿದೆ.
ಜೆಡಿಎಸ್ ಇದಕ್ಕೂ ಮೊದಲು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡು ಜಿಲ್ಲಾ ಪಂಚಾಯಿತಿ ಅಧಿಕಾರ ಹಿಡಿಯಲು ಮುಂದಾಗಿತ್ತು. ಈ ಮೂಲಕ ಕಾಂಗ್ರೆಸ್​ಗೆ ಟಾಂಗ್​ ಕೊಡಲು ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ ಇದೀಗ ಎಲ್ಲವೂ ಅದಲು ಬದಲಾಗಿದ್ದು ವರಿಷ್ಠರ ಮಾತಿನಂತೆ ಮೈತ್ರಿ ಧರ್ಮ ಪಾಲನೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com