'ಮನ್ ಕೀ ಬಾತ್ ಸುಳ್ಳುಗಳನ್ನು ತುಂಬಿದ ಚೀಲ'- ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಆಕಾಶವಾಣಿಯ ಜನಪ್ರಿಯ ಮನ್ ಕೀ ಬಾತ್ ಸುಳ್ಳುಗಳನ್ನು ತುಂಬಿದ ಚೀಲ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಪ್ರಧಾನಿ ಮೋದಿ, ಸಿದ್ದರಾಮಯ್ಯ
ಪ್ರಧಾನಿ ಮೋದಿ, ಸಿದ್ದರಾಮಯ್ಯ
Updated on: 

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಆಕಾಶವಾಣಿಯ ಜನಪ್ರಿಯ ಮನ್ ಕೀ ಬಾತ್  ಸುಳ್ಳುಗಳನ್ನು ತುಂಬಿದ ಚೀಲ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈಗ ದೇಶದ ಜನರು ಐದು ವರ್ಷಗಳ ಬಿಜೆಪಿ ದುರಾಡಳಿತವನ್ನು ನೋಡಿದ್ದಾರೆ. ಅಚ್ಚೆ ದಿನ್ ಹೆಸರಿನಲ್ಲಿ ಭಾಷಣ ಮಾಡಿ ನೀಡಿದ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂದು ಸಿದ್ದರಾಮಯ್ಯ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅಚ್ಚೇ ದಿನ್ ಏಲ್ಲಿ ? 2 ಕೋಟಿ ಉದ್ಯೋಗ, ಕಪ್ಪು ಹಣ ಏಲ್ಲಿ ?  ಎಂದು ಪ್ರಶ್ನಿಸಿರುವ ಸಿದ್ದರಾಮಯ್ಯ, ನಾನು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ಧ ಭರವಸೆಗಳನ್ನು ಈಡೇರಿಸಿದ್ದೇನೆ. ನರೇಂದ್ರ ಮೋದಿ ಅವರು ನೀಡಿದ್ದ ಭರವಸೆಗಳು ಈಡೇರಿಸಲಾಗಿದೆಯೇ ? ಎಂದು ಕೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com