ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಕೋನರೆಡ್ಡಿ ನೇಮಕ

ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಮುಖ್ಯಮಂತ್ರಿ...
ಎನ್ ಎಚ್ ಕೋನರೆಡ್ಡಿ
ಎನ್ ಎಚ್ ಕೋನರೆಡ್ಡಿ
ಬೆಂಗಳೂರು: ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ನವಲಗುಂದ ಕ್ಷೇತ್ರದ ಮಾಜಿ ಶಾಸಕರಾಗಿರುವ ಕೋನರೆಡ್ಡಿ ಅವರು, ಹಲವು ವರ್ಷಗಳಿಂದ ಜೆಡಿಎಸ್‍ ಪಕ್ಷದಲ್ಲಿದ್ದು, 2018 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ವಿಧಾನ ಪರಿಷತ್ ನಾಮನಿರ್ದೇಶನ ಸ್ಥಾನಕ್ಕೆ ಕೋನರೆಡ್ಡಿ ಹೆಸರು ಕೇಳಿಬಂದಿತ್ತಾದರೂ ಅದು ಕೈತಪ್ಪಿತ್ತು. 
ಲೋಕಸಭೆ ಚುನಾವಣೆ ಹಿನ್ನೆಲೆ ಮಾಜಿ ಶಾಸಕ ಕೋನರೆಡ್ಡಿ ಅವರಿಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.
ಇನ್ನು ಈ ಹುದ್ದೆಗೆ ಆರಂಭದಲ್ಲಿ ಮಾಜಿ ಶಾಸಕ ಮಧುಬಂಗಾರಪ್ಪ ಅವರ ಹೆಸರು ಸಹ ಕೇಳಿಬಂದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com