9 ಜೆಡಿಎಸ್ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳ ಬಳಿಕ ಜೆಡಿಎಸ್ ತನ್ನ 9 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕಲ್ಪಿಸಿದೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ 9 ತಿಂಗಳ ಬಳಿಕ ಜೆಡಿಎಸ್ ತನ್ನ 9  ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕಲ್ಪಿಸಿದೆ. 
ಮಾಜಿ ಶಾಸಕರಿಗೆ ಅಧಿಕಾರ ನೀಡುವ ಮೂಲಕ ಲೋಕಸಭಾ ಚುನಾವಣೆ ವೇಳೆ ರಾಜಕೀಯ ಲಾಭ ಮಾಡಿಕೊಳ್ಳಲು ಉದ್ದೇಶಿಸಿದ್ದ ಜೆಡಿಎಸ್ ಪಕ್ಷ ಇದೀಗ ಶಾಸಕರ ಒತ್ತಡಕ್ಕೆ ಮಣಿದು ಮಣೆ ಹಾಕಿದೆ. 9 ಶಾಸಕರಿಗೆ  ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶಿಸಿದ್ದಾರೆ.
ನಾಗನಗೌಡ ಕಂದಕೂರು- ಅಧ್ಯಕ್ಷರು - ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿ
ರಾಜಾವೆಂಕಟಪ್ಪ ನಾಯಕ್- ಅಧ್ಯಕ್ಷರು- ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ದಿ ನಿಗಮ.
ಡಿ.ಸಿ.ಗೌರಿ ಶಂಕರ್ -ಅಧ್ಯಕ್ಷರು-ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್( ಎಂಎಎಸ್ಐಎಲ್) 
ಬಿ.ಸತ್ಯನಾರಾಯಣ -ಅಧ್ಯಕ್ಷರು- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
ನಿಸರ್ಗ ನಾರಾಯಣ ಸ್ವಾಮಿ -ಅಧ್ಯಕ್ಷರು-ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ.
ಡಾ.ಕೆ.ಅನ್ನದಾನಿ-ಅಧ್ಯಕ್ಷರು-ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ.
ಕೆ.ಎಂ.ಶಿವಲಿಂಗೇಗೌಡ-ಅಧ್ಯಕ್ಷರು- ಕರ್ನಾಟಕ ಗೃಹ ಮಂಡಳಿ
ಕೆ.ಮಹದೇವ್- ಅಧ್ಯಕ್ಷರು- ಕರ್ನಾಟಕ ರಾಜ್ಯ ಕೈಗಾರಿಕೆ ಮೂಲ ಸೌಕರ್ಯ ಅಭಿವೃದ್ದಿ ನಿಗಮ.
ಮಹಮ್ಮದ್ ಜಫ್ರುಲ್ಲಾ ಖಾನ್ ಅವರನ್ನು ಕರ್ನಾಟಕ ಅಲ್ಪ ಸಂಖ್ಯಾತ ಅಭಿವೃದ್ದಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com