ಇಂದು ನಗರದಲ್ಲಿ, ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ನಡೆಸಿದ ವೈಮಾನಿಕ ದಾಳಿಯಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಲಾಭವಾಗಲಿದೆ ಎಂಬ ಬಿಎಸ್ ವೈ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ನಮ್ಮ ಯೋಧರ ಪತ್ನಿಯರು ವಿಧವೆಯರಾಗುತ್ತಿದ್ದಾರೆ, ಎಷ್ಟೋ ಕುಟುಂಬಗಳು ತಮ್ಮ ಪುತ್ರನನ್ನು ಕಳೆದುಕೊಳ್ಳುತ್ತಿವೆ. ಆದರೆ ಬಿಜೆಪಿಯವರು ಯೋಧರ ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಇದು ನಾಚಿಕೆಗೇಡಿನ ವಿಚಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.