ದೆಹಲಿ ತಲುಪಿದ 'ಆಪರೇಷನ್ 'ರಾಜಕೀಯ: ವರಿಷ್ಠರೊಂದಿಗೆ ರಾಜ್ಯ ಕಾಂಗ್ರೆಸ್ ನಾಯಕರ ಮಾತುಕತೆ

ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಪ್ರಯತ್ನಿಸುತ್ತಿದೆ ಎಂಬ ಊಹಾಪೋಹಗಳ ನಡುವೆ ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸುವಂತೆ ರಾಜ್ಯ ಕಾಂಗ್ರೆಸ್ ನಲ್ಲಿನ ಹಿರಿಯ ನಾಯಕರು ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದಾರೆ....

ಕೋಲಾರ:  ಜೆಡಿಎಸ್ - ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು  ಬಿಜೆಪಿ ಆಪರೇಷನ್ ಕಮಲಕ್ಕೆ ಪ್ರಯತ್ನಿಸುತ್ತಿದೆ ಎಂಬ ಊಹಾಪೋಹಗಳ ನಡುವೆ ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸುವಂತೆ  ರಾಜ್ಯ ಕಾಂಗ್ರೆಸ್ ನಲ್ಲಿನ  ಹಿರಿಯ ನಾಯಕರು  ಪಕ್ಷದ ವರಿಷ್ಠರಿಗೆ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಖರೀದಿಸಲು ಪ್ರಯತ್ನಿಸುತ್ತಿದೆ ಎಂಬ ವಿಚಾರವನ್ನು  ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು ಎಐಸಿಸಿ  ಪ್ರಧಾನ ಕಾರ್ಯದರ್ಶಿ ರಾಜ್ಯ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪ್ರಸ್ತುತದಲ್ಲಿನ ರಾಜ್ಯ ರಾಜಕೀಯದ ಬಗ್ಗೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ವೇಣುಗೋಪಾಲ್, ಗುಲಾಂ ನಬಿ ಅಜಾದ್,  ಅಹ್ಮದ್ ಪಟೇಲ್ ಅವರೊಂದಿಗೆ  ರಾಜ್ಯದಲ್ಲಿನ ಹಲವು ನಾಯಕರು ಮಾತುಕತೆ ನಡೆಸಿದ್ದು, ಪಕ್ಷದ ಹಿತದೃಷ್ಟಿ  ಹಾಗೂ ಇತರ ಎಲ್ಲಾ ಅಂಶಗಳ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂಬುದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com