ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರೇವಣ್ಣ, ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿಯವರು ಈ ಕೆಲಸ ಮಾಡುತ್ತಿದ್ದಾರೆ. ವಾಮಮಾರ್ಗದಲ್ಲಿ ಅಧಿಕಾರ ಹಿಡಿಯಲು ಯತ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಬರಗಾಲ ಇದ್ದರೂ ಬರ ನಿರ್ವಹಣೆ ಮಾಡದೆ ಈ ರೀತಿ ಸರ್ಕಾರ ಅಸ್ಥಿರಕ್ಕೆ ಯತ್ನಿಸಲಾಗುತ್ತಿದೆ. ದೆಹಲಿಗೆ ಶಾಸಕರನ್ನು ಕರೆದುಕೊಂಡು ಹೋಗಿ ಈ ರೀತಿ ಮಾಡಿದ್ದಾರೆ. ಈ ಆಪರೇಷನ್ ಎಲ್ಲ ಬಿಟ್ಟು ರಾಜ್ಯದ ಅಭಿವೃದ್ಧಿಗೆ ಸಹಕರಿಸಿ ಎಂದು ಯಡಿಯೂರಪ್ಪಗೆ ಮನವಿ ಮಾಡುತ್ತೇನೆ ಎಂದರು.