ಬೆಂಗಳೂರು: ಹಂದಿಜ್ವರದಿಂದ ಬಳಲುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು, ರಾಜ್ಯದ ಸಮ್ಮಿಶ್ರ ಸರ್ಕಾರ ಬೀಳಿಸೋಕೆ ಮುಂದಾದರೆ, ಹಂದಿಜ್ವರದ ಜತೆ ವಾಂತಿ ಬೇಧಿನೂ ಆಗುತ್ತೆ ಅಂತ ವ್ಯಂಗ್ಯವಾಡಿದ್ದಾರೆ.