ಈಗಲ್ ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ: ಪಕ್ಷ ವಿರೋಧಿಗಳ ವಿರುದ್ಧ ಕ್ರಮ- ಸಿದ್ದರಾಮಯ್ಯ

ಬಿಜೆಪಿಯ ಆಪರೇಷನ್ ಕಮಲದ ಭೀತಿಯಿಂದಾಗಿ ಕಾಂಗ್ರೆಸ್ ಶಾಸಕರು ಹೊರವಲಯ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದು, ಶಾಸಕಾಂಗ ಸಭೆಯಲ್ಲಿ ಪ್ರಸ್ತುತ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಲಾಗಿದೆ.
ಕಾಂಗ್ರೆಸ್ ಶಾಸಕರು
ಕಾಂಗ್ರೆಸ್ ಶಾಸಕರು
Updated on

ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲದ ಭೀತಿಯಿಂದಾಗಿ ಕಾಂಗ್ರೆಸ್ ಶಾಸಕರು ಹೊರವಲಯ ಬಿಡದಿಯ ಈಗಲ್ ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದು, ಶಾಸಕಾಂಗ ಸಭೆಯಲ್ಲಿ ಪ್ರಸ್ತುತ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ನಡೆಸಲಾಗಿದೆ.

ಪ್ರಸ್ತುತ ರಾಜ್ಯ ರಾಜಕೀಯ, ಬರ ಪರಿಸ್ಥಿತಿ, ಹಾಗೂ ಬಜೆಟ್ ಪ್ರಸ್ತಾವ ಕುರಿತಂತೆ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು  ಕೆಪಿಸಿಸಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಭೆಯಲ್ಲಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮಾತನಾಡಿ, ಪಕ್ಷ ವಿರೋಧಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. 
ಪಕ್ಷಾಂತರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಮುಕ್ತ ಅವಕಾಶವಿದೆ ಎಂದಿರುವ ಸಿದ್ದರಾಮಯ್ಯ ಈ ಸಂಬಂಧಿತ ಸುಪ್ರೀಂಕೋರ್ಟ್ ಆದೇಶವನ್ನು ಓದಿ ಹೇಳಿದ್ದಾರೆ ಎಂಬುದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com