ಕಾಂಗ್ರೆಸ್ ಶಾಸಕರ ಬಡಿದಾಟ: ಗಣೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ; ಆನಂದ್ ಸಿಂಗ್ ಪತ್ನಿ

: ಶಾಸಕ ಆನಂದ್ ಸಿಂಗ್ ಅವರ ಮೇಲೆ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆನಂದ್ ಸಿಂಗ್ ಪತ್ನಿ ಲಕ್ಷ್ಮಿ ಸಿಂಗ್ ಗಣೇಶ್ ...
ಆನಂದ್ ಸಿಂಗ್
ಆನಂದ್ ಸಿಂಗ್
Updated on: 
ಬೆಂಗಳೂರು: ಶಾಸಕ ಆನಂದ್ ಸಿಂಗ್ ಅವರ ಮೇಲೆ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆನಂದ್ ಸಿಂಗ್ ಪತ್ನಿ ಲಕ್ಷ್ಮಿ ಸಿಂಗ್ ಗಣೇಶ್ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಒಂದು ವೇಳೆ ಕಣೇಶ್ ನನ್ನ ಪತಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬು ಸತ್ಯ ಎಂದಾದಾರೆ ನಾನು ಕೈಕಟ್ಟಿ ಕೂರುವುದಿಲ್ಲ, ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ, ಮುಂಬಯಿಯಲ್ಲಿ  ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕಾಗಿ ತೆರಳಿದ್ದು ಶೀಘ್ರವೇ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ,
ತಮಗೆ ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲ. ಆದರೆ ಮಾಧ್ಯಮಗಳ ವರದಿಯಿಂದ ತಮ್ಮ ಪತಿ ಆನಂದ್ ಸಿಂಗ್ ಮೇಲೆ ಗಣೇಶ್ ಹಲ್ಲೆ ಮಾಡಿದ್ದಾನೆಂಬ ವಿಚಾರ ತಿಳಿದು ಬಂದಿದೆ. ಒಂದೊಮ್ಮೆ ಈ ವಿಚಾರ ಸತ್ಯವಾಗಿದ್ದರೆ ತಮ್ಮ ಪತಿ ಸುಮ್ಮನಿದ್ದರೂ ತಾವು ಮಾತ್ರ ಯಾವುದೇ ಕಾರಣಕ್ಕೂ ಗಣೇಶ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ತಿಳಿಸಿದ್ದಾರೆ.
ಮಾಧ್ಯಮಗಳ ಮೂಲಕ ವಿಚಾರ ತಿಳಿಯುತ್ತಿದ್ದಂತೆಯೇ ಸತ್ಯಾಂಶ ತಿಳಿಯಲು ಪದೇ ಪದೇ ಕಾಲ್ ಮಾಡಿದರೂ ಯಾರು ಕೂಡ ಏನು ನಡೆದಿದೆ ಎಂಬುದನ್ನು ತಿಳಿಸುತ್ತಿಲ್ಲ. ಫೋನ್ ಮಾಡಿದರೇ ಆನಂದ್ ಸಿಂಗ್ ನಿದ್ರಿಸುತ್ತಾರೆ ಎಂದು ಹೇಳುತ್ತಾರೆ, ನನ್ನ ಮಗ ಸಚಿವ ಡಿ,ಕೆ ಶಿವಕುಮಾರ್ ಅವರಿಗೆ ಕರೆ ಮಾಡಿದ್ದ, ಆನಂದ್ ಸಿಂಗ್ ಚೆನ್ನಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ,
ನನ್ನ ಸಹೋದರರು ಪತಿ ಜೊತೆಯಲ್ಲಿ ಆಸ್ಪತ್ರೆಯಲ್ಲಿದ್ದಾರೆ  ಆಸ್ಪತ್ರೆಯಿಂದ ಯಾವಾಗ ಡಿಸ್ಚಾರ್ಜ್ ಮಾಡುತ್ತಾರೆ ಎಂಬುದು ತಿಳಿದಿಲ್ಲ ಎಂದು ಹೇಳಿದ್ದಾರೆ, ಈ ಮಧ್ಯೆ ಕಂಪ್ಲಿ ಶಾಸಕ ಗಣೇಶ್ ವಿರುದ್ಧ ಆನಂದ್ ಸಿಂಗ್ ಬೆಂಬಲಿಗರು ಬಳ್ಳಾರಿ ಜಿಲ್ಲೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗಣೇಶ್ ನಿವಾಸಕ್ಕೆ ಪೊಲೀಸರು ಬಿಗಿ ಭದ್ರತೆ ಕಲ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com