ಕಾಂಗ್ರೆಸ್ ನಾಯಕರ ಸಭೆ
ಕಾಂಗ್ರೆಸ್ ನಾಯಕರ ಸಭೆ

ಆನಂದ್ ಸಿಂಗ್ ಮೇಲೆ ಹಲ್ಲೆ; ರಾಜ್ಯ ನಾಯಕರ ವಿರುದ್ದ ರಾಹುಲ್ ಗಾಂಧಿ ಫುಲ್ ಗರಂ

ಈಗಲ್ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ನಡೆದ ಹಲ್ಲೆ ಪ್ರಕರಣ ದೆಹಲಿ ಕಾಂಗ್ರೆಸ್ ಪ್ರಧಾನ ಕಚೇರಿಗೂ ತಲುಪಿದ್ದು, ರಾಜ್ಯ ನಾಯಕರ ವಿರುದ್ದ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ಈಗಲ್ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ್ ಸಿಂಗ್ ಮೇಲೆ ನಡೆದ ಹಲ್ಲೆ ಪ್ರಕರಣ ದೆಹಲಿ ಕಾಂಗ್ರೆಸ್ ಪ್ರಧಾನ ಕಚೇರಿಗೂ ತಲುಪಿದ್ದು, ರಾಜ್ಯ ನಾಯಕರ ವಿರುದ್ದ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆ ರಾಜ್ಯ ಮಾಧ್ಯಮಗಳಷ್ಟೇ ಅಲ್ಲದೇ ರಾಷ್ಟ್ರೀಯ ಸುದ್ದಿ ವಾಹಿನಿಗಳೂ ಕೂಡ ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣವನ್ನು ಬಿತ್ತರಿಸುವುದರೊಂದಿಗೆ ರಾಷ್ಟ್ರೀಯ ಮಾಧ್ಯಮಗಳಲ್ಲೂ ಹಲ್ಲೆ ಪ್ರಕರಣ ಭಾರಿ ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರ ಕಾಂಗ್ರೆಸ್ ಅಧ್ಯಕ್ಷತ್ರ ರಾಹುಲ್ ಗಾಂಧಿ ಅವರಿಗೂ ಮುಟ್ಟಿದ್ದು ಈ ಕುರಿತು ರಾಜ್ಯ ನಾಯಕರ ವಿರುದ್ಧ ರಾಹುಲ್ ಗಾಂಧಿ ಫುಲ್ ಗರಂ ಆಗಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ವಿಚಾರ ತಿಳಿಯುತ್ತಿದ್ದಂತೆಯೇ ರಾಜ್ಯದ ಹಿರಿಯ ನಾಯಕರುಗಳಿಗೆ ಕರೆ ಮಾಡಿರುವ ರಾಹುಲ್ ಗಾಂಧಿ ಪ್ರಕರಣದ ಮಾಹಿತಿ ಪಡೆದಿದ್ದಾರೆ. ಅಲ್ಲದೆ ಒಂದು ವೇಳೆ ಶಾಸಕ ಗಣೇಶ್ ಅಥವಾ ಮತ್ತಿತ್ತರ ಶಾಸಕರು ತಪ್ಪು ಮಾಡಿದ್ದರೆ ಮುಲಾಜಿಲ್ಲದೇ ಶಿಸ್ತುಕ್ರಮ ಕೈಗೊಳ್ಳಿ ಎಂದು ಖಡಕ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 
ಇನ್ನು ರಾಹುಲ್ ಗಾಂಧಿ ಸೂಚನೆ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಇಂದು ತುರ್ತು ಶಾಸಕಾಂಗ ಸಭೆ ಕರೆದಿದ್ದರು. ಇಂದು ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಸಭೆಗೆ ಎಲ್ಲರೂ ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ ನೀಡಿದ್ದರು. ಸಭೆಯಲ್ಲಿ  ಕಾಂಗ್ರೆಸ್ ಪಕ್ಷದದಿಂದ ಹಲ್ಲೆಕೋರ ಶಾಸಕ ಗಣೇಶ್ ಉಚ್ಛಾಟನೆಯಾಗುವ ಸಾಧ್ಯತೆಯಿದ್ದು, ಇಂದು ಅಥವಾ ನಾಳೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ನಿರ್ಧಾರ ಪ್ರಕಟವಾಗಲಿದೆ ಎನ್ನಲಾಗಿದೆ. ಆಪರೇಷನ್ ಕಮಲದ ಮಧ್ಯೆ ಶಾಸಕರ ಕೊರತೆ ಇರುವಾಗ ಉಚ್ಚಾಟನೆಯ ನಿರ್ಧಾರ ಕೈಗೊಳ್ಳುತ್ತಾ ಎನ್ನುವ ಪ್ರಶ್ನೆ ಎದುರಾಗಿದ್ದು ಯಾವ ಶಿಸ್ತು ಕ್ರಮ ಕೈಗೊಳ್ಳುತ್ತದೆ ಎನ್ನುವ ಕುತೂಹಲ ಹೆಚ್ಚಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com