ಈಗಲ್ಟನ್ ರೆಸಾರ್ಟ್ ನಲ್ಲಿ ಸಣ್ಣ ಅಚಾತುರ್ಯ ನಡೆದಿರುವುದು ನಿಜ-ಸಿಎಂ ಕುಮಾರಸ್ವಾಮಿ

ಕೆಲ ದಿನಗಳ ಹಿಂದೆ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನ ಶಾಸಕರೆಲ್ಲ ಒಟ್ಟುಗೂಡಿದ್ದಾಗ ಒಂದು ಸಣ್ಣ...
ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ)
ಸಿಎಂ ಹೆಚ್ ಡಿ ಕುಮಾರಸ್ವಾಮಿ(ಸಂಗ್ರಹ ಚಿತ್ರ)
Updated on

ಬೆಂಗಳೂರು: ಕೆಲ ದಿನಗಳ ಹಿಂದೆ ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ನ ಶಾಸಕರೆಲ್ಲ ಒಟ್ಟುಗೂಡಿದ್ದಾಗ ಒಂದು ಸಣ್ಣ ಅಚಾತುರ್ಯ ನಡೆದಿರುವುದು ನಿಜ. ಅಲ್ಲಿ ನಡೆದ ಘಟನೆಗಳ ಬಗ್ಗೆ ಈಗಾಗಲೇ ಮಾಹಿತಿಗಳನ್ನು ಪಡೆದಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ನಾನು ಗಮನಿಸಿದ್ದೇನೆ. ಇವತ್ತು ಆನಂದ್ ಸಿಂಗ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಬೇಕೆಂದಿದ್ದೇನೆ ಎಂದರು.

ಯಾವ ವಿಷಯಗಳನ್ನೂ ಮುಚ್ಚಿಹಾಕಿ ಸರ್ಕಾರವನ್ನು ದುರುಪಯೋಗಪಡಿಸಿಕೊಳ್ಳಲು ನಾನು ಹೋಗುವುದಿಲ್ಲ.  ಕಾನೂನು ವ್ಯಾಪ್ತಿಯೊಳಗೆ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಲು ಈಗಾಗಲೇ ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದೇನೆ. ಈ ವಿಚಾರದಲ್ಲಿ ಯಾವುದೇ ರೀತಿಯಲ್ಲೂ ಯಾರನ್ನೂ ರಕ್ಷಣೆ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

ಇಲ್ಲಿ ಆಗಬಾರದ ಘಟನೆ ನಡೆದುಹೋಗಿದೆ. ಜನಸಾಮಾನ್ಯರಲ್ಲಿ ಜನಪ್ರತಿಗಳ ಬಗ್ಗೆ ದಿನೇದಿನೇ ಅಪನಂಬಿಕೆಗಳು, ಅವಿಶ್ವಾಸಗಳು ಮೂಡುವಂತಹ ವಾತಾವರಣ ನಿರ್ಮಾಣವಾಗಬಾರದು. ಇದನ್ನು ಯಾವ ರೀತಿ ಸರಿಪಡಿಸಬೇಕು ಎನ್ನುವುದರ ಬಗ್ಗೆ ನಾನು ನನ್ನದೇ ಆದ ವೈಯಕ್ತಿಕ ರೀತಿಯಲ್ಲಿ ಸಮಸ್ಯೆಗಳನ್ನು ತಿಳಿಗೊಳಿಸಲು ಪ್ರಯತ್ನಪಡುತ್ತೇನೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com