ನನ್ನ ಕ್ಷೇತ್ರದ ಜನತೆಗಾಗಿ ನಾನು ದುಡಿಯುತ್ತೇನೆ: ಮಹೇಶ್ ಕುಮಟಳ್ಳಿ

ಕಳೆದ 25 ದಿನಗಳಿಂದಲೂ ನಾಪತ್ತೆಯಾಗಿದ್ದ ಅಥಣಿಯ ಕಾಂಗ್ರೆಸ್ ಶಾಸಕ ಸ್ವಕ್ಷೇತ್ರಕ್ಕೆ ವಾಪಸ್ಸಾಗಿದ್ದಾರೆ....
ಮಹೇಶ್ ಕಮಟಳ್ಳಿ
ಮಹೇಶ್ ಕಮಟಳ್ಳಿ
Updated on: 
ಅಥಣಿ: ಕಳೆದ 25 ದಿನಗಳಿಂದಲೂ ನಾಪತ್ತೆಯಾಗಿದ್ದ ಅಥಣಿಯ ಕಾಂಗ್ರೆಸ್ ಶಾಸಕ ಸ್ವಕ್ಷೇತ್ರಕ್ಕೆ ವಾಪಸ್ಸಾಗಿದ್ದಾರೆ.
ಕಾಂಗ್ರೆಸ್‌ ಮೇಲೆ ಮುನಿಸಿಕೊಂಡು ಮುಂಬೈನ ಪಂಚತಾರಾ ಹೊಟೆಲ್ ಸೇರಿ ಬಿಜೆಪಿಗೆ ಹಾರಲು ಸಜ್ಜಾಗಿದ್ದ ಅವರು ಕ್ಷೇತ್ರಕ್ಕೆ ಕಾಲಿಟ್ಟಿರಲಿಲ್ಲ.
ನಮ್ಮ ನಾಯಕ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್‌ ಮೇಲೆ ಮುನಿಸಿದ್ದಿದ್ದು ನಿಜ, ಆದರೆ ಈಗ ಎಲ್ಲವೂ ಸರಿ ಹೋಗಿದೆ. ನಾವು ಯಾವುದೇ ಹಣ ಅಥವಾ ಅಧಿಕಾರದ ಆಮೀಷಕ್ಕೆ ಒಳಗಾಗಿ ಮುಂಬೈಗೆ ಹೋಗಿರಲಿಲ್ಲ ಎಂದು ಅವರು ಹೇಳಿದ್ದಾರೆ. ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ನಮ್ಮ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅತ್ಯಾಂತ ಅಲಗೇಳವಕಾರಿಯಾಗಿ ಕಮೆಂಟ್ ಮಾಡಲಾಗಿತ್ತು. ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಲ್ಲ ಎಂದು ಹೇಳಿದ್ದಾರೆ. 
ನಮ್ಮ ನಾಯಕ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್‌ ಮೇಲೆ ಮುನಿಸಿದ್ದಿದ್ದು ನಿಜ, ಆದರೆ ಈಗ ಎಲ್ಲವೂ ಸರಿ ಹೋಗಿದೆ. ನಾವು ಯಾವುದೇ ಹಣ ಅಥವಾ ಅಧಿಕಾರದ ಆಮೀಷಕ್ಕೆ ಒಳಗಾಗಿ ಮುಂಬೈಗೆ ಹೋಗಿರಲಿಲ್ಲ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com