ನನ್ನ ಕಾರ್ಯವೈಖರಿ ಇಷ್ಟವಾಗದಿದ್ದರೆ ರಾಜೀನಾಮೆ ನೀಡಲು ಸಿದ್ಧ: ಕಾಂಗ್ರೆಸ್ ಗೆ ಕುಮಾರಸ್ವಾಮಿ ಎಚ್ಚರಿಕೆ

ಕಾಂಗ್ರೆಸ್ ಶಾಸಕರು ಮಿತಿ ಮೀರಿ ವರ್ತಿಸುತ್ತಿದ್ದಾರೆ. ಅವರನ್ನು ನಾಯಕರು ಹದ್ದುಬಸ್ತಿನಲ್ಲಿಡಬೇಕು, ಅವರು ಇದೇ ರೀತಿ ತಮ್ಮ ವರ್ತನೆಯನ್ನು ಮುಂದುವರಿಸಿದರೆ ...
ಸಿಎಂ ಹೆಚ್ ಡಿ ಕುಮಾರಸ್ವಾಮಿ
ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಶಾಸಕರು ಮಿತಿ ಮೀರಿ ವರ್ತಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಅವರನ್ನು ಹದ್ದುಬಸ್ತಿನಲ್ಲಿಡಬೇಕು, ಅವರು ಇದೇ ರೀತಿ ತಮ್ಮ ವರ್ತನೆಯನ್ನು ಮುಂದುವರಿಸುವುದಿದ್ದರೆ ನನ್ನ ಕಾರ್ಯವೈಖರಿ ಇಷ್ಟವಾಗದಿದ್ದರೆ ನಾನು ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಿದ್ದ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋದ ಹಸಿರು ಮಾರ್ಗದ ಮೊದಲ ಆರು ಬೋಗಿಯ ಮೆಟ್ರೊ ರೈಲು ಸಂಚಾರಕ್ಕೆ ಚಾಲನೆ ನೀಡಿ ಸುದ್ದಿಗಾರರ ಜೊತೆ ಮಾತನಾಡಿದರು. ಇದಕ್ಕೆಲ್ಲಾ ಕಾಂಗ್ರೆಸ್ ನಾಯಕರು ಉತ್ತರ ಕೊಡಬೇಕು, ನಾನು ಉತ್ತರ ನೀಡಲು ಸೂಕ್ತ ವ್ಯಕ್ತಿಯಲ್ಲ, ನನ್ನ ಕಾರ್ಯವೈಖರಿಯನ್ನು ಅವರು ಒಪ್ಪಲು ಸಿದ್ದವಿಲ್ಲದಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ನನಗೆ ಸಿಎಂ ಕುರ್ಚಿಗೆ ಅಂಟಿಕೊಂಡು ಕೂರುವ ಮೋಹವಿಲ್ಲ ಎಂದರು.

ಅವರು ಹೀಗೆಯೇ ತಮ್ಮ ವರ್ತನೆಯನ್ನು ಮುಂದುವರಿಸಿದರೆ ನಾನು ಸಿಎಂ ಹುದ್ದೆ ತ್ಯಜಿಸಲು ಸಿದ್ದ. ಕಾಂಗ್ರೆಸ್ ಶಾಸಕರು ತಮ್ಮ ಗಡಿ ಮೀರಿ ವರ್ತಿಸುತ್ತಿದ್ದಾರೆ, ಉತ್ತಮ ಆಡಳಿತ ನೀಡಲೆಂದೇ ಮೈತ್ರಿ ಸರ್ಕಾರವನ್ನು ರಚಿಸಿದ್ದು ಎಂದು ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ಹೊರಹಾಕಿದರು.

ನಿನ್ನೆ ಬೆಂಗಳೂರಿನಲ್ಲಿ ಕುರುಬರ ಸಂಘದ ವತಿಯಿಂದ ನಿರ್ಮಿಸಿರುವ ಕನಕ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವರಾದ ಪುಟ್ಟರಂಗಶೆಟ್ಟಿ, ಎಂ.ಟಿ.ಬಿ. ನಾಗರಾಜು ಹಾಗೂ ಶಾಸಕ ಎಸ್‌.ಟಿ. ಸೋಮಶೇಖರ್‌ ಭಾಗಿಯಾಗಿದ್ದರು. ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ತಮ್ಮ ರಾಜಕೀಯ ಗುರುಗಳನ್ನು ಹೊಗಳುವ ಮೂಲಕ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂಬ ಇಂಗಿತವನ್ನು ಇವರೆಲ್ಲ ವ್ಯಕ್ತಪಡಿಸಿದರು. ಅಲ್ಲದೇ ಸಚಿವ-ಶಾಸಕರ ಮನದ ಮಾತುಗಳಿಗೆ ಕಾಗಿನೆಲೆ ಈಶ್ವರಾನಂದಪುರಿ ಸ್ವಾಮೀಜಿ ಕೂಡ ಕೈಜೋಡಿಸಿದರು. ಇಲ್ಲಿ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂಬ ಕೂಗು ಬಲವಾಗಿ ಕೇಳಿ ಬಂತು.

ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಕಾರ್ಯಕ್ರಮದಲ್ಲಿ ಮಾತನಾಡಿ, ಸಮ್ಮಿಶ್ರ ಸರ್ಕಾರದಲ್ಲಿ ಬೆಂಗಳೂರು ನಗರದ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿವೆ ಎಂದಿದ್ದರು.

ಅದಕ್ಕೆ ಉತ್ತರಿಸಿರುವ ಸಿಎಂ, ಬೆಂಗಳೂರಿನಲ್ಲಿ ಫೆರಿಫೆರಲ್ ರಿಂಗ್ ರಸ್ತೆ, ಉಪ ನಗರ ರೈಲು ಸಂಪರ್ಕ, ಎಲೆವೇಟೆಡ್ ಕಾರಿಡಾರ್ ಮತ್ತು ಇನ್ನೂ ಹಲವು ಯೋಜನೆಗಳಿಗೆ ರಾಜ್ಯ ಸರ್ಕಾರ 1 ಲಕ್ಷ ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.

#WATCH: Karnataka CM HD Kumaraswamy says "...If they want to continue with the same thing, I am ready to step down. They are crossing the line", when asked 'Congress MLAs are saying that Siddaramaiah is their CM'.' pic.twitter.com/qwErh4aEq4

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com