ನಮಗೆಲ್ಲರಿಗೂ ಕುಮಾರಸ್ವಾಮಿಯವರೇ ಸಿಎಂ: ದಿನೇಶ್ ಗುಂಡೂರಾವ್

ಮುಖ್ಯಮಂತ್ರಿಗಳಿಗೆ ಮೆಚ್ಯೂರಿಟಿ ಇಲ್ಲ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ನೀಡಿರುವ ಹೇಳಿಕೆ ...
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮ
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮ

ಬೆಂಗಳೂರು: ಮುಖ್ಯಮಂತ್ರಿಗಳಿಗೆ ಮೆಚ್ಯೂರಿಟಿ ಇಲ್ಲ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ನೀಡಿರುವ ಹೇಳಿಕೆ ಸರಿಯಲ್ಲ, ಸರ್ಕಾರದ ವಿರುದ್ಧ ಮುಖ್ಯಮಂತ್ರಿಗಳ ವಿರುದ್ಧ ಯಾರೂ ಮಾತನಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಹಾತ್ಮಾ ಗಾಂಧೀಜಿ ಹುತಾತ್ಮ ದಿನಾಚರಣೆ ಗೌರವಾರ್ಥ ಇಂದು ಕೆಪಿಸಿಸಿ ಕಚೇರಿಯಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಯರೆಡ್ಡಿ ಯಾವಾಗಾಲೂ ತುಂಬಾ ಮಾತನಾಡುವವರು, ಹೀಗೆ ಮಾತನಾಡುವಾಗ ಆವೇಶದಿಂದ ಅವರು ಆ ರೀತಿ ಹೇಳಿರಬಹುದು. ಆದರೆ ಆ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ. ನಾನು ಅವರ ಜೊತೆ ಮಾತನಾಡಿದ್ದೇನೆ ಎಂದರು.

ಸರ್ಕಾರದಲ್ಲಿ ಮೇಲಿನ ಹಂತದ ನಾಯಕರ ಬಳಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಸಿಎಂ ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಜೊತೆ ಚೆನ್ನಾಗಿದ್ದಾರೆ, ದೇವೇಗೌಡರು ರಾಹುಲ್ ಗಾಂಧಿ ಚೆನ್ನಾಗಿದ್ದಾರೆ, ಯಾರ ಮಧ್ಯೆಯೂ ಭಿನ್ನಾಭಿಪ್ರಾಯಗಳಿಲ್ಲ. ಸರ್ಕಾರದ ಏನೇ ವಿಚಾರಗಳಿದ್ದರೂ ನಾನು ಡ್ಯಾನಿಷ್ ಆಲಿ ಜೊತೆ ಚರ್ಚೆ ಮಾಡುತ್ತೇನೆ. ಕೆಳಗಿನ ಹಂತದಲ್ಲಿ ಅಲ್ಲೊಬ್ಬರು, ಇಲ್ಲೊಬ್ಬರು ಈ ರೀತಿ ಮಾತನಾಡುತ್ತಾರೆ, ಸರ್ಕಾರದ ವಿರುದ್ಧ ಯಾರೂ ಹೇಳಿಕೆ ನೀಡಬಾರದು ಎಂದು ಹೇಳುತ್ತೇವೆ ಎಂದರು.

ನಮ್ಮೆಲ್ಲರಿಗೂ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದು, ಡಾ ಜಿ ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿದ್ದಾರೆ. ಅಭಿಮಾನದಿಂದ ಕೆಲವರು ಸಿದ್ದರಾಮಯ್ಯ ನಮ್ಮ ಸಿಎಂ ಅನ್ನುತ್ತಾರೆ. ಸಿದ್ದರಾಮಯ್ಯ ನಮ್ಮ ಸಿಎಂ ಅಂದ್ರೆ ತಪ್ಪಲ್ಲ, ಅದು ಆ ಕ್ಷಣಕ್ಕೆ ಅವೇಶದಿಂದ ಮಾತನಾಡುವುದಷ್ಟೆ, ಅದಕ್ಕೆ ವಿಶೇಷವಾದ ಅರ್ಥ ಕಲ್ಪಿಸಿಕೊಳ್ಳುವ ಅಗತ್ಯವಿಲ್ಲ ಎಂದು ದಿನೇಶ್ ಗುಂಡೂರಾವ್ ಸಮಜಾಯಿಷಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com