ಇಂದು ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಯಾವುದೇ ಚಿಂತನೆ ನಡೆಸಿಲ್ಲ. ಮೈತ್ರಿ ಸರ್ಕಾರದಲ್ಲಿನ ಬದಲಾವಣೆಗಳು, ರಾಜಕೀಯ ಬೆಳವಣಿಗೆಗಳನ್ನು ನೋಡಿ ಸದನದಲ್ಲಿ ಯಾವ ರೀತಿ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಎಂಬ ಬಗ್ಗೆ ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಸಭೆಯ ಬಳಿಕವಷ್ಟೇ ಬಿಜೆಪಿಯ ಮುಂದಿನ ನಡೆ ಏನು ಎಂಬುದು ಸ್ಪಷ್ಟವಾಗಲಿದೆ ಎಂದರು.