ಶಿವಮೊಗ್ಗ: ಕೇವಲ ಕಾಂಗ್ರೆಸ್ ಮಾತ್ರವಲ್ಲ, ಜೆಡಿಎಸ್ ಶಾಸಕರು ಕೂಡ ರಾಜಿನಾಮ ನೀಡಲಿದ್ದಾರೆ ಎಂದು ಹಿರಿಯ ಬಿಜೆಪಿ ಮುಖಂಡ ಮತ್ತು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಬಿಜೆಪಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ, ಶಾಸಕರ ರಾಜಿನಾಮೆಯಿಂದಲೇ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ
ಬಳ್ಳಾರಿಯಲ್ಲಿ 3,367 ಎಕರೆ ಭೂಮಿಯನ್ನು ಸರ್ಕಾರ ಜಿಂದಾಲ್ ಸಂಸ್ಥೆಗೆ ಮಾರಿದ್ದನ್ನು ವಿರೋಧಿಸಿ ಆನಂದ್ ಸಿಂಗ್ ರಾಜಿನಾಮೆ ನೀಡಿದ್ದಾರೆ. ಭೂಮಿಯ ಮೂಲ ಬೆಲೆ 3 ಸಾವಿರ ಕೋಟಿ ಇದೆ, ಆದರೆ ಸರ್ಕಾರ ಕೇವಲ 30 ಕೋಟಿಗೆ ಮಾರಾಟ ಮಾಡಿದೆ ಎಂದು ಆರೋಪಿಸಿದ್ದಾರೆ.
ಸ್ವಾಭಿಮಾನವುಳ್ಳ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇದನ್ನು ವಿರೋಧಿಸಿ ರಾಜಿನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.