ಸಮ್ಮಿಶ್ರ ಸರ್ಕಾರಕ್ಕೆ ಅಪಾಯವಿಲ್ಲ- ಕೆ.ಸಿ. ವೇಣುಗೋಪಾಲ್

ಇಬ್ಬರು ಶಾಸಕರ ರಾಜೀನಾಮೆಯಿಂದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅಪಾಯ ಎದುರಾಗುವುದಿಲ್ಲ ಎಂದು ಐಸಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಹೇಳಿದ್ದಾರೆ.
ಕೆ. ಸಿ. ವೇಣುಗೋಪಾಲ್
ಕೆ. ಸಿ. ವೇಣುಗೋಪಾಲ್
ನವದೆಹಲಿ: ಇಬ್ಬರು ಶಾಸಕರ ರಾಜೀನಾಮೆಯಿಂದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅಪಾಯ ಎದುರಾಗುವುದಿಲ್ಲ ಎಂದು ಐಸಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದಲೂ ಬಿಜೆಪಿ ಒಂದಲ್ಲಾ ಒಂದು ರೀತಿಯಲ್ಲಿ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದರೂ ಸಮ್ಮಿಶ್ರ ಸರ್ಕಾರ ತನ್ನ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆದಾಗ್ಯೂ, ಪಕ್ಷದ ನಿಯಮ ಉಲ್ಲಂಘಿಸಿದರೆ ಕಠಿಣ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತದೆ. ಪಕ್ಷದ ಯಾವುದೇ ಶಾಸಕ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರೆ ಪಕ್ಷವು ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವೇಣುಗೋಪಾಲ್,  ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ವಾಪಾಸ್ ಪಡೆಯಲಿದ್ದು, ಪಕ್ಷದಲ್ಲಿಯೇ ಮುಂದುವರೆಯಲಿದ್ದಾರೆ ಎಂದು ತಿಳಿಸಿದರು. 
ದೂರವಾಣಿ ಮೂಲಕ ಇಬ್ಬರೊಂದಿಗೆ ಮಾತುಕತೆ ನಡೆಸಿದ್ದೇನೆ. ತಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಪಕ್ಷದಲ್ಲಿಯೇ ಮುಂದುವರೆಯುವುದಾಗಿ ಭರವಸೆ ನೀಡಿದ್ದಾರೆ. ಅವರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪಕ್ಷದ ರಾಜ್ಯ ಮುಖಂಡರು ಹಾಗೂ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಚರ್ಚೆ ನಡೆಸಲಿದ್ದಾರೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com