ಜೆಡಿಎಸ್ ಯುವ ಘಟಕಕ್ಕೆ ನಿಖಿಲ್ ಸಾರಥಿ: ರಾಜ್ಯಾಧ್ಯಕ್ಷರಾಗಿ ಎಚ್.ಕೆ ಕುಮಾರಸ್ವಾಮಿ ನೇಮಕ

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಜೆಡಿಎಸ್ ಪಕ್ಷ ಸಂಘಟನೆಗೆ ಮುಂದಾಗಿದ್ದು, ಆ ನಿಟ್ಟಿನಲ್ಲಿ ಎಚ್.ವಿಶ್ವನಾಥ್ ಅವರಿಂದ ತೆರವಾಗಿದ್ದ ...
ಜೆಡಿಎಸ್ ಯುವ ಘಟಕಕ್ಕೆ ನಿಖಿಲ್ ಸಾರಥಿ: ರಾಜ್ಯಾಧ್ಯಕ್ಷರಾಗಿ ಎಚ್.ಕೆ ಕುಮಾರಸ್ವಾಮಿ ನೇಮಕ
ಜೆಡಿಎಸ್ ಯುವ ಘಟಕಕ್ಕೆ ನಿಖಿಲ್ ಸಾರಥಿ: ರಾಜ್ಯಾಧ್ಯಕ್ಷರಾಗಿ ಎಚ್.ಕೆ ಕುಮಾರಸ್ವಾಮಿ ನೇಮಕ
Updated on
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಜೆಡಿಎಸ್ ಪಕ್ಷ ಸಂಘಟನೆಗೆ ಮುಂದಾಗಿದ್ದು, ಆ ನಿಟ್ಟಿನಲ್ಲಿ ಎಚ್.ವಿಶ್ವನಾಥ್ ಅವರಿಂದ ತೆರವಾಗಿದ್ದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಾಸಕ ಎಚ್.ಕೆ ಕುಮಾರಸ್ವಾಮಿ ಅವರನ್ನು ನೇಮಿಸಲಾಗಿದೆ.
ಈ ಸಂಬಂಧ ಇಂದು ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಎಚ್.ಕೆ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ನ ನೂತನ ರಾಜ್ಯಾಧ್ಯಕ್ಷರನ್ನಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಧಿಕೃತವಾಗಿ ಘೋಷಿಸಿದ್ದಾರೆ.
ಇದರ ನಡುವೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರನ್ನಾಗಿ ನಿಖಿಲ್ ಕುಮಾರ ಸ್ವಾಮಿ ಅವರನ್ನು ನೇಮಿಸಲಾಗಿದೆ. ಜೆಪಿ ಭವನದಲ್ಲಿ ಎಚ್.ಡಿ.ದೇವೇಗೌಡರು ಹೆಸರನ್ನು ಘೋಷಿಸಿ, ನಿಖಿಲ್ ಕುಮಾರಸ್ವಾಮಿಗೆ ಹಾರ ಹಾಕಿ ಶುಭಹಾರೈಸಿದರು. ಒಬ್ಬರೇ ಕಾರ್ಯಾಧ್ಯಕ್ಷರಿದ್ದು ಮಧು ಬಂಗಾರಪ್ಪ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಲಿದ್ದಾರೆ ಎಂದು ದೇವೇಗೌಡರು ತಿಳಿಸಿದ್ದಾರೆ.
ನಿರ್ಗಮಿತ ಅಧ್ಯಕ್ಷ ಎಚ್. ವಿಶ್ವನಾಥ್ ಅವರು ನೂತನ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರಿಗೆ ಶಾಲು ಹೊದಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ಹಿರಿಯ ಮುಖಂಡ ಬಸವರಾಜ್ ಹೊರಟ್ಟಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com