ಡಿಸಿಎಂ ಪರಮೇಶ್ವರ್, ಡಿಕೆಶಿ ಸೇರಿ 21 ಸಚಿವರು ರಾಜೀನಾಮೆ - ಸಿದ್ದರಾಮಯ್ಯ

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಸೇರಿದಂತೆ 21 ಕಾಂಗ್ರೆಸ್ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಸೇರಿದಂತೆ 21 ಕಾಂಗ್ರೆಸ್ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಿವಾಸದಲ್ಲಿಂದು ಆಯೋಜಿಸಲಾಗಿದ್ದ  ಉಪಹಾರ ಕೂಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ  ಐಟಿ,ಇಡಿಯನ್ನು ದುರ್ಬಳಕೆ ಮಾಡಿಕೊಂಡು  ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಹೆದರಿಸುತ್ತಿದೆ.
ಅದರ ಕುತಂತ್ರವನ್ನು ತಡೆಟ್ಟಲು ಬೇರೆ ದಾರಿಯಿರಲಿಲ್ಲ.ಪಕ್ಷದ ಶಿಸ್ತಿನ ಸಿಪಾಯಿಗಳಾಗಿ 21 ಸಚಿವರು  ಸ್ವಇಚ್ಚೆಯಿಂದ ತಮ್ಮ ಸ್ಥಾನಕ್ಕೆ  ರಾಜೀನಾಮೆ ನೀಡಿದ್ದಾರೆ ಎಂದು ತಿಳಿಸಿದರು.
ಸಚಿವ ಸ್ಥಾನ ಸಿಗದೆ ಕೆಲ ಶಾಸಕರು ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದಾರೆ. ಆ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಮನವೊಲಿಸಲಾಗುವುದು, ಬಿಜೆಪಿಯ ಆಪರೇಷನ್ ಕಮಲ ಯಶಸ್ವಿಯಾಗುವುದಿಲ್ಲ.ಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ.  ಯಾವುದೇ ಕಾರಣಕ್ಕೂ ಸಮ್ಮಿಶ್ರ  ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಾಗುವುದಿಲ್ಲ ಎಂದರು.
ಬಿಜೆಪಿ  ಆಪರೇಷನ್ ಕಮಲದ ಮೂಲಕ ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಒಂದು ವರ್ಷದಿಂದಲೂ ನಿರಂತರವಾಗಿ ಪ್ರಯತ್ನಿಸುತ್ತಿದೆ. 2008ರಲ್ಲಿ ಬಿ. ಎಸ್ ಯಡಿಯೂರಪ್ಪ ಇದೇ ರೀತಿ ಮಾಡಿದ್ದರು ಎಂದು ಹೇಳಿದ ಸಿದ್ದರಾಮಯ್ಯ,  ಅತೃಪ್ತ ಶಾಸಕರಿಗೆ ವಿಶೇಷ ವಿಮಾನ ಆಯೋಜನೆ ಮಾಡುವವರು  ಯಾರು ಎಂದು ಪ್ರಶ್ನಿಸಿದರು. ಇದರ ಹಿಂದೆ ಬಿಜೆಪಿ ಕೇಂದ್ರ ನಾಯಕರಾದ ಅಮಿತ್ ಶಾ, ಪ್ರಧಾನಿ ಮೋದಿ ಕೈವಾಡ ಇದೆ ಎಂದು ಆಪಾದಿಸಿದರು. 
ಇದೇ ವೇಳೆ  ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ. ಸಿ. ವೇಣುಗೋಪಾಲ್,  ಲೋಕಸಭಾ ಚುನಾವಣೆ ಬಳಿಕ ಬಿಜೆಪಿ ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದೆ. ಐದು ವರ್ಷಗಳಲ್ಲಿ ಹಲವು ರಾಜ್ಯಗಳಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸಿದೆ. ಪಶ್ಚಿಮ ಬಂಗಾಳ ಹಾಗೂ ಆಂಧ್ರ ಪ್ರದೇಶದಲ್ಲೂ ಇಂತಹ್ಹದೇ ಕೆಲಸ ಮಾಡಿದೆ. ಆದರೆ, ಕರ್ನಾಟಕದಲ್ಲಿನ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಗೆ ಸಾಧ್ಯವಾಗುವುದಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com