ಡಿ ಕೆ ಶಿವಕುಮಾರ್
ರಾಜಕೀಯ
ವಿಮಾನ ನಿಲ್ದಾಣದಲ್ಲಿ ಬಿಎಸ್ ವೈ ಆಪ್ತ ಸಹಾಯಕ, ಡಿಕೆಶಿ ನಡುವೆ ಜಟಾಪಟಿ, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು!
ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಸಚಿವ ಡಿಕೆ ಶಿವಕುಮಾರ್ ಹಾಗೂ ಪಕ್ಷೇತರ ಶಾಸಕ ಆರ್ ಶಂಕರ್...
ಬೆಂಗಳೂರು: ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಸಚಿವ ಡಿಕೆ ಶಿವಕುಮಾರ್ ಹಾಗೂ ಪಕ್ಷೇತರ ಶಾಸಕ ಆರ್ ಶಂಕರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನತ್ತ ತೆರಳಲು ಸಹಾಯ ಮಾಡಿದ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕ ಸಂತೋಷ್ ನಡುವೆ ಸೋಮವಾರ ತೀವ್ರ ಜಟಾಪಟಿ ನಡೆದಿದೆ.
ಇಂದು ರಾಜೀನಾಮೆ ನೀಡಿ ವಿಮಾನ ನಿಲ್ದಾಣದತ್ತ ತೆರಳಿದ ಆರ್.ಶಂಕರ್ ಬಗ್ಗೆ ಮಾಹಿತಿ ಪಡೆದು ವಿಮಾನ ನಿಲ್ದಾಣದತ್ತ ತೆರಳಿದ ಡಿಕೆ ಶಿವಕುಮಾರ್ ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂತೋಷ್ ಎದುರಾಗಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ವಿಮಾನ ನಿಲ್ದಾಣದಲ್ಲಿದ್ದ ಆರ್ ಶಂಕರ್ ಅವರನ್ನು ಮುಂಬೈಗೆ ಕಳುಹಿಸಲು ಬೇಕಾದ ಸಿದ್ಧತೆಗಳನ್ನು ಸಂತೋಷ್ ಪೂರ್ಣಗೊಳಿಸಿದ್ದರು.
ಇದರಿಂದ ಆಕ್ರೋಶಗೊಂಡ ಡಿಕೆ ಶಿವಕುಮಾರ್ ಅವರು ಸಂತೋಷ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಿಲ್ದಾಣದ ಒಳಗಡೆ ಅಲ್ಲಿದ್ದ ಸಾರ್ವಜನಿಕರ ಮುಂದೆಯೇ ಶಿವಕುಮಾರ್ ಮತ್ತು ಸಂತೋಷ್ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು ಎನ್ನಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ