ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಚಿಂತನೆ ಬಿಜೆಪಿ ಮುಂದಿಲ್ಲ- ಅರವಿಂದ ಲಿಂಬಾವಳಿ

ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಬಿಜೆಪಿ ಚಿಂತನೆ ನಡೆಸಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಅರವಿಂದ ಲಿಂಬಾವಳಿ
ಅರವಿಂದ ಲಿಂಬಾವಳಿ
ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆ ಬಿಜೆಪಿ ಚಿಂತನೆ ನಡೆಸಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಹೇಳಿದ್ದಾರೆ.
 ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ವಿಳಂಬವಾದರೆ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಲಿದೆ ಎಂದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಅತೃಪ್ತ ಶಾಸಕರು ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧ ಇಲ್ಲ. ಆದರೆ, ರಾಜೀನಾಮೆ ಕೊಟ್ಟರೆ ಸರ್ಕಾರ  ಅಲ್ಪಮತಕ್ಕೆ ಕುಸಿಯಲಿದೆ. ಹೀಗಿರುವಾಗಿ ಸದನವನ್ನು ಹೇಗೆ ನಡೆಸಲು ಸಾಧ್ಯ ಎಂದು ಪ್ರಶ್ನಿಸಿದರು.
ಶಾಸಕರ ರಾಜೀನಾಮೆ ಅಂಗೀಕಾರ ವಿಳಂಬವಾದರೆ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಲಿದೆ  ಆದ್ದರಿಂದ ರಾಜ್ಯಪಾಲರಿಗೆ ಮಧ್ಯಪ್ರವೇಶಿಸುವಂತೆ ಆಗ್ರಹಿಸಲಿದ್ದೇವೆ ಎಂದ ಅರವಿಂದ ಲಿಂಬಾವಳಿ,  ಮುಂದಿನ ಎಲ್ಲಾ ನಿರ್ಧಾರವನ್ನು ನಾಳೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com