ನನ್ನ ವೈಯಕ್ತಿಕ ಜೀವನ, ನನ್ನ ಆರ್ಥಿಕ ಪರಿಸ್ಥಿತಿ ಎಲ್ಲ ವಿಚಾರಗಳನ್ನು ಹಳ್ಳಿ ಹಕ್ಕಿಯಲ್ಲಿ ಬರೆದಿದ್ದೇನೆ. ನನ್ನ ಚಾರಿತ್ರ್ಯ ಹರಣ ಮಾಡುವ ಪ್ರಯತ್ನ ಮಾಡಲಾಗಿದೆ. ಇಂತಹದನ್ನು ಬೇಕಾದಷ್ಟು ನೋಡಿದ್ದೇವೆ. ಇದಕ್ಕೆಲ್ಲ ಬೆದರುವುದಿಲ್ಲ. ಸಚಿವ ಸ್ಥಾನ ಸೇರಿದಂತೆ ಯಾವುದೇ ಆಮಿಷಕ್ಕೆ ನಾನು ಒಪ್ಪದಕಾರಣ ಈ ಹೊಸ ಪ್ರಯೋಗವನ್ನು ಮಾಡಲಾಗಿದೆ. ಇಂತಹ ಕುತಂತ್ರಗಳು ಫಲ ನೀಡುವುದಿಲ್ಲ ಎಂದು ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.