ಸಚಿವರು, ಶಾಸಕರ ಮೇಲೆ ಮುಂಬೈ ಪೊಲೀಸರ ಹಲ್ಲೆ ಅಸಹನೀಯ: ಸಿಎಂ ಎಚ್ ಡಿಕೆ

Published On :
ಬೆಂಗಳೂರು: ಕರ್ನಾಟಕದ ಸಚಿವರು ಮತ್ತು ಶಾಸಕರ ಮೇಲಿನ ಮುಂಬೈ ಪೊಲೀಸರ ಹಲ್ಲೆ ಅಸಹನೀಯ ಎಂದು ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮುಂಬೈನ ಖಾಸಗಿ ಹೊಟೆಲ್ ನಲ್ಲಿರುವ ಕರ್ನಾಟಕದ ಕಾಂಗ್ರೆಸ್ ಶಾಸಕರ ಮನವೊಲಿಸಿ ವಾಪಸ್ ಕರೆತರಲು ತೆರಳಿದ್ದ ಸಚಿವರಾದ ಡಿಕೆ ಶಿವಕುಮಾರ್, ಜಿಟಿ ದೇವೇಗೌಡ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪೊಲೀಸರು ರಾಜ್ಯ ನಾಯಕರ ಮೇಲೆ ಹಲ್ಲೆ ಮಾಡಿದ್ದು ಎಂದು ಹೇಳಲಾಗುತ್ತಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಫುಲ್ ಗರಂ ಆಗಿದ್ದಾರೆ.
ಈ ಕುರಿತಂತೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಎಚ್ ಡಿಕೆ, ಕರ್ನಾಟಕದ ಸಚಿವರು ಮತ್ತು ಶಾಸಕರ ಮೇಲಿನ ಮುಂಬೈ ಪೊಲೀಸರ ಹಲ್ಲೆ ಅಸಹನೀಯ. ಪೊಲೀಸರು ರಾಜಕೀಯ ಒತ್ತಡಕ್ಕೆ ಒಳಗಾಗಿ ತಮ್ಮ ನೈತಿಕತೆಯನ್ನು ಮರೆಯಬಾರದು. ಮಹಾರಾಷ್ಟ್ರ ಸರ್ಕಾರ ಬಿಜೆಪಿಯ ಕುದುರೆ ವ್ಯಾಪಾರಕ್ಕೆ ಈ ಮೂಲಕ ನೆರವು ನೀಡುತ್ತಿದ್ದು, ಇದು ದೇಶದ ಇತಿಹಾಸಕ್ಕೆ ದೊಡ್ಡ ಕಪ್ಪು ಚುಕ್ಕಿ ಎಂದು ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುCongressಕಾಂಗ್ರೆಸ್BengaluruJDSPoliticsKarnatakaಜೆಡಿಎಸ್HD Kumaraswamyಎಚ್ ಡಿ ಕುಮಾರಸ್ವಾಮಿಕರ್ನಾಟಕ ರಾಜಕೀಯ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


