ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಂದ ಕರೆ ಬಂದಿದ್ದು ಅವರಿಗೆ ತಮ್ಮ ಸ್ಥಾನದ ಬಗ್ಗೆ ತಿಳಿಸಿದ್ದೇನೆ ಎಂದು ರಾಮಲಿಂಗಾ ರೆಡ್ಡಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನು ಎಸ್ ಟಿ ಸೋಮಶೇಖರ್, ಭೈರತಿ ಬಸವರಾಜ್ ಮತ್ತು ಮುನಿರತ್ನ ಅವರಿಗೆ ಪ್ರೇರಣೆ ಕೊಟ್ಟಿದ್ದು ಎಂದು ಹಲವರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಅದು ಸುಳ್ಳು, ಅವರು ನನ್ನ ಬಳಿ ಬಂದು ರಾಜೀನಾಮೆ ಬಗ್ಗೆ ಮಾತನಾಡಿದರು, ನಾವೆಲ್ಲ ಒಟ್ಟಿಗೆ ರಾಜೀನಾಮೆ ಕೊಟ್ಟೆವು ಅಷ್ಟೆ ಎಂದರು.