ವಿಶ್ವಾಸ ಮತಯಾಚಿಸಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ಧಾರ

ಬಂಡಾಯ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸುವಂತಿಲ್ಲ, ಅನರ್ಹಗೊಳಿಸುವಂತಿಲ್ಲ, ಮಂಗಳವಾರದವರೆಗೂ ಯಥಾಸ್ಥಿತಿ...
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
Updated on
ಬೆಂಗಳೂರು: ಬಂಡಾಯ ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸುವಂತಿಲ್ಲ, ಅನರ್ಹಗೊಳಿಸುವಂತಿಲ್ಲ, ಮಂಗಳವಾರದವರೆಗೂ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿಶ್ವಾಸಮತ ಯಾಚಿಸುವುದಾಗಿ  ಘೋಷಿಸಿದ್ದಾರೆ.
ವಿಧಾನಸಭೆಯಲ್ಲಿಂದು ಸಂತಾಪ ಸೂಚನೆ ವೇಳೆಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿ, ಸದ್ಯದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ವಿಶ್ವಾಸ ಮತ ಯಾಚಿಸಲು ನಿರ್ಧರಿಸಿರುವುದಾಗಿ ಕುಮಾರಸ್ವಾಮಿ ತಿಳಿಸಿದರು.  
ಸದನದ ಬೆಂಬಲವಿದ್ದಾಗ ಮಾತ್ರ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಲು ಸಾಧ್ಯ. ಈ ಹಿನ್ನೆಲೆಯಲ್ಲಿ ವಿಶ್ವಾಸಮತ ಯಾಚನೆಗೆ ಮುಂದಾಗಿದ್ದು, ವಿಶ್ವಾಸಮತಕ್ಕೆ ಸಮಯ ನಿಗದಿಪಡಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಬಳಿ ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿಕೊಂಡರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com