ಗಿರೀಶ್ ಕಾರ್ನಾಡ್, ಧನಂಜಯ್ ಕುಮಾರ್, ಸಿ.ಎಸ್. ಶಿವಳ್ಳಿ ಅವರಿಗೆ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ

ಇತ್ತೀಚಿಗೆ ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಗಿರೀಶ್ ಕಾರ್ನಾಡ್, ಕೇಂದ್ರದ ಮಾಜಿ ಸಚಿವ ವಿ. ಧನಂಜಯ್ ಕುಮಾರ್, ಮಾಜಿ ಸಚಿವ ಸಿ.ಎಸ್. ಶಿವಳ್ಳಿ ಮತ್ತಿತರ ಗಣ್ಯರಿಗೆ ವಿಧಾನಮಂಡಲದಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
Updated on
ಬೆಂಗಳೂರು: ಇತ್ತೀಚಿಗೆ ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ಗಿರೀಶ್ ಕಾರ್ನಾಡ್,  ಕೇಂದ್ರದ ಮಾಜಿ ಸಚಿವ ವಿ. ಧನಂಜಯ್ ಕುಮಾರ್, ಮಾಜಿ ಸಚಿವ ಸಿ.ಎಸ್. ಶಿವಳ್ಳಿ ಮತ್ತಿತರ ಗಣ್ಯರಿಗೆ ವಿಧಾನಮಂಡಲದಲ್ಲಿಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಇವರಲ್ಲದೇ, ಮಾಜಿ ಶಾಸಕರಾದ ಕೆ ಎಲ್ ಶಿವಲಿಂಗೇಗೌಡ, ಎಸ್.ಎಸ್. ಅರಕೇರಿ, ದಮಯಂತಿ ಬೋರೇಗೌಡ, ಚನ್ನವೀರಯ್ಯ ಶಾಂತಯ್ಯ , ಮುತ್ತಿನ ಬೆಳ್ಳಿ ಮಠದ ಡಾ. ವಿಜಯ್ ಕುಮಾರ್ ಖಂಡ್ರೆ, ಎಚ್. ಗೋಪಾಲ ಭಂಡಾರಿ, ಶಾರದವ್ವ ಎಂ ಪಟ್ಟಣ, ಡಾ. ಎಚ್. ಬಿ. ನಂಜಪ್ಪ, ಸತ್ಯನಾರಾಯಣ, ಸಂಭಾಜಿ ಲಕ್ಷಣ ಪಾಟೀಲ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸದನ ಸಮಾವೇಶಗೊಳ್ಳುತ್ತಿದ್ದಂತೆ  ಸಭಾಧ್ಯಕ್ಷ ಕೆ. ಆರ್. ರಮೇಶ್ ಕುಮಾರ್ ಸಂತಾಪ ಸೂಚಕ ನಿರ್ಣಯ ಮಂಡಿಸಿ, ಮೃತರ ಗುಣಗಾನ ಮಾಡಿದರು. ಈ ನಿರ್ಣಯ ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹಾಗೂ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಮತ್ತಿತರರು ಅಗಲಿದ ಗಣ್ಯರ ಕೊಡುಗೆಯನ್ನು ಸ್ಮರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com