ಮೈತ್ರಿ ಸರ್ಕಾರ ಐದು ವರ್ಷ ಪೂರೈಸುವ ನಂಬಿಕೆಯಿಲ್ಲ- ಜಿ. ಟಿ. ದೇವೇಗೌಡ

ರಾಜ್ಯದಲ್ಲಿನ ಮೈತ್ರಿ ಸರ್ಕಾರ ಐದು ವರ್ಷ ಪೂರೈಸುವ ನಂಬಿಕೆಯಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ. ಟಿ. ದೇವೇಗೌಡ ಸಂಶಯ ವ್ಯಕ್ತಪಡಿಸಿದ್ದಾರೆ.
ಜಿ. ಟಿ. ದೇವೇಗೌಡ
ಜಿ. ಟಿ. ದೇವೇಗೌಡ
ಮೈಸೂರು: ರಾಜ್ಯದಲ್ಲಿನ ಮೈತ್ರಿ ಸರ್ಕಾರ ಐದು ವರ್ಷ ಪೂರೈಸುವ ನಂಬಿಕೆಯಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಜಿ. ಟಿ. ದೇವೇಗೌಡ ಸಂಶಯ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವಾಸ ಮತಯಾಚಿಸಲು ಮುಖ್ಯಮಂತ್ರಿ ವಿಧಾನಸಭೆಯಲ್ಲಿ ಸಮಯಾವಕಾಶ ಕೇಳಿದ್ದಾರೆ. ಸ್ಪೀಕರ್ ಅವರು ಶೀಘ್ರದಲ್ಲಿಯೇ ದಿನಾಂಕ ನಿಗದಿ ಮಾಡುವುದಾಗಿ ಹೇಳಿದ್ದಾರೆ. ನಿಗದಿತ ದಿನದಂದು ಮುಖ್ಯಮಂತ್ರಿ ವಿಶ್ವಾಸ ಮತಯಾಚಿಸಲಿದ್ದಾರೆ ಎಂದರು.
ವಿಶ್ವಾಸಮತ ಯಾಚನೆ ದಿನ ಎಲ್ಲರೂ ಸದನಕ್ಕೆ ಹಾಜರಾಗುತ್ತಾರೆ.  ಸದ್ಯದ ಪರಿಸ್ಥಿತಿಯಲ್ಲಿ ಐದು ವರ್ಷ ಸರ್ಕಾರ ಮುಂದುವರೆಯುತ್ತದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಆದರೆ, ವಿಶ್ವಾಸಮತ ಯಾಚನೆಯಲ್ಲಿ ಗೆಲ್ಲುತ್ತೇವೆ ಎಂದಷ್ಟೇ ಹೇಳಬಲ್ಲೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಂಟಿಬಿ ನಾಗರಾಜ್ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ವಾಪಾಸ್ ಪಡೆಯುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು , ಅದು ನನಗೆ ತಿಳಿದಿಲ್ಲ. ಮೈತ್ರಿ ಪಕ್ಷಗಳಿಂದ ರಿವರ್ಸ್ ಆಪರೇಷನ್ ಮಾಡುವ ಬಗ್ಗೆ ಬಿಜೆಪಿ ನಾಯಕರಿಗೆ ಭಯವಿದೆ. ಅತೃಪ್ತ ಶಾಸಕರನ್ನು ಮನವೊಲಿಸುವ ಕೆಲಸವನ್ನು ಎಲ್ಲರೂ ಮಾಡುತ್ತಿದ್ದಾರೆ. ಹೀಗಾಗಿ ಮೈತ್ರಿ ಸರ್ಕಾರ ಉಳಿಯಲಿದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com