ಬೆಂಗಳೂರು: ಅತೃಪ್ತ ಶಾಸಕರ ಬಣ ಸೇರಲು ಸಚಿವ ಎಂಟಿಬಿ ನಾಗರಾಜ್ ಬಿಜೆಪಿ ನಾಯಕ ಆರ್.ಅಶೋಕ್ ಜೊತೆ ಮುಂಬೈಗೆ ತೆರಳುತ್ತಿದ್ದಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡವು ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಮಾಧುಸ್ವಾಮಿ, ಸಿ ಟಿ ರವಿ ಸೇರಿದಂತೆ ಕೆಲ ಕಮಲ ನಾಯಕರು ಪಕ್ಷದ ಮುಂದಿನ ನಡೆ, ಸೋಮವಾರ ವಿಧಾನಸಭೆಯಲ್ಲಿ ಪಕ್ಷ ಕೈಗೊಳ್ಳಬೇಕಾದ ತಂತ್ರಗಳ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು