ಅತೃಪ್ತ ಶಾಸಕರ ಮನವೊಲಿಕೆ ಕಗ್ಗಂಟು: ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದೆ- ಈಶ್ವರ್ ಖಂಡ್ರೆ

ಅತೃಪ್ತ ಶಾಸಕರ ಮನವೊಲಿಸುವ ಕಾರ್ಯ ಕಗ್ಗಂಟಾಗಿರುವಂತೆ ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಈಶ್ವರ್ ಖಂಡ್ರೆ
ಈಶ್ವರ್ ಖಂಡ್ರೆ
Updated on
ಬೆಂಗಳೂರು:ಅತೃಪ್ತ ಶಾಸಕರ ಮನವೊಲಿಸುವ ಕಾರ್ಯ ಕಗ್ಗಂಟಾಗಿರುವಂತೆ ಕಾಂಗ್ರೆಸ್ 
ಪಕ್ಷ ಸಂಕಷ್ಟದಲ್ಲಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಎಚ್. ಕೆ. ಪಾಟೀಲ್ ಜೊತೆಗೆ ಇಂದು ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ್ ಖಂಡ್ರೆ, ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದೆ.ಇಂತಹ ಸ್ಥಿತಿಯಲ್ಲಿ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆಯಬೇಕೆಂದು  ರಾಮಲಿಂಗಾರೆಡ್ಡಿ ಅವರ ಬಳಿ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ಇಂದು ಸಂಕಷ್ಟದಲ್ಲಿದೆ. ಆದರೆ, ಸಮ್ಮಿಶ್ರ ಸರ್ಕಾರ ಪತನವಾಗುವುದಿಲ್ಲ. ಯಾವುದೇ ಊಹಾಪೋಹಗಳಿಗೆ ಕಿವಿಗೂಡದೆ ಕಾದು ನೋಡಿ. ರಾಮಲಿಂಗಾರೆಡ್ಡಿ ಅವರಂತಹ ಹಿರಿಯ ನಾಯಕರು ಪಕ್ಷದೊಂದಿಗೆ ಇರಬೇಕು. ಹೀಗಾಗಿ ಅವರನ್ನು ಭೇಟಿ ಮಾಡಿ ರಾಜೀನಾಮೆ ವಾಪಾಸ್ ಪಡೆಯುವಂತೆ ಮನವಿ ಮಾಡಿದ್ದೇವೆ ಎಂದು ಈಶ್ವರ್ ಖಂಡ್ರೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com