ವಿಶ್ವಾಸಮತಯಾಚನೆ ಮುನ್ನ ಎಲ್ಲಾ ಶಾಸಕರ ಮನವೊಲಿಕೆ- ಸಿದ್ದರಾಮಯ್ಯ

ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿಶ್ವಾಸಮತಯಾಚನೆ ಮುನ್ನ ಎಲ್ಲಾ ಶಾಸಕರನ್ನು ಮನವೊಲಿಸಲಾಗುವುದು ಎಂದು ವಿಶ್ವಾಸ ಹೊಂದಿರುವುದಾಗಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿಶ್ವಾಸಮತಯಾಚನೆ ಮುನ್ನ ಎಲ್ಲಾ ಶಾಸಕರನ್ನು ಮನವೊಲಿಸಲಾಗುವುದು ಎಂದು  ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರತಿಯೊಬ್ಬರನ್ನು ಸಂಪರ್ಕಿಸಲು ಪ್ರಯತ್ನಿಸಲಾಗುತ್ತಿದೆ. ವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಮುಂಬೈನಲ್ಲಿರುವ ಎಲ್ಲಾ ಅತೃಪ್ತ ಶಾಸಕರು ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಅವರೊಂದಿಗೆ ಸಂಪರ್ಕದಲ್ಲಿರುವುದಾಗಿ ತಿಳಿಸಿದರು.
ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್ ಹಾಗೂ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಪಕ್ಷಕ್ಕೆ ವಾಪಾಸ್ ಆಗಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸುಧಾಕರ್ ಬಗ್ಗೆ ಮಾತನಾಡುವುದಿಲ್ಲ. ರಾಜೀನಾಮೆ ಹಿಂತೆಗೆದುಕೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ. ನಾಗರಾಜ್ ಹಾಗೂ ಸುಧಾಕರ್  ಒಟ್ಟಿಗೆ ನಿರ್ಧಾರ ಕೈಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿಯೇ ಉಳಿಯುವುದಾಗಿ ಎಂಟಿಬಿ ನಾಗರಾಜ್  ನಿರ್ಧರಿಸಿದ್ದಾರೆ. ಸುಧಾಕರ್ ಹಾಗೂ ಎಂಟಿಬಿ ನಾಗರಾಜ್ ಒಟ್ಟಿಗೆ ರಾಜೀನಾಮೆಯನ್ನು ಹಿಂಪಡೆಯಲಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com