ಸಿಎಂ ತಮ್ಮ ಇಮೇಜ್ ಉಳಿಸಿಕೊಳ್ಳಲು ರೇವಣ್ಣ ಹೆಸರಿಗೆ ಡ್ಯಾಮೇಜ್: ಚಲುವರಾಯಸ್ವಾಮಿ

ಪ್ರಸಕ್ತ ರಾಜ್ಯ ರಾಜಕೀಯ ಸ್ಥಿತಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯೇ ನೇರ ಕಾರಣ ಎಂದು ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಗಂಭೀರ ಆರೋಪ ..
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on: 
ಮಂಡ್ಯ: ಪ್ರಸಕ್ತ ರಾಜ್ಯ ರಾಜಕೀಯ ಸ್ಥಿತಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯೇ ನೇರ ಕಾರಣ ಎಂದು ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಈ ಸ್ಥಿತಿಗೆ ಮುಖ್ಯಮಂತ್ರಿಗಳೇ ಕಾರಣ. ಮುಖ್ಯಮಂತ್ರಿಗಳು ತನ್ನ ಹೆಸರನ್ನು ಉಳಿಸಿಕೊಳ್ಳಲು ರೇವಣ್ಣನ ಹೆಸರನ್ನು ಡ್ಯಾಮೇಜ್ ಮಾಡುತ್ತಿದ್ದಾರೆ, ಹಾಗಿದ್ದರೇ ಅವರನ್ನೇ ಸಚಿವ ಸ್ಥಾನದಿಂದ ಹೊರಗಿಟ್ಟು ಸರ್ಕಾರ ನಡೆಸಬಹುದಿತ್ತಲ್ಲ ಎಂದು ಪ್ರಶ್ನಿಸಿದ್ದಾರೆ.
ಮೈತ್ರಿ ಸರ್ಕಾರ ಈ ರೀತಿ ಆಗಲು ಅಣ್ಣ-ತಮ್ಮಂದಿರೇ ಹೊಣೆ ಮುಖ್ಯಮಂತ್ರಿ ಇಲ್ಲದೇ ರೇವಣ್ಣ ಒಬ್ಬರೇ ಹೊಣೆಯಾಗಲು ಸಾಧ್ಯವಿಲ್ಲ. ಅಂತಿಮವಾಗಿ ಸಹಿ ಹಾಕುವವರು, ನಿರ್ಧಾರ ತೆಗೆದುಕೊಳ್ಳುವವರು ಮುಖ್ಯಮಂತ್ರಿ ತಾನೇ. ಮುಖ್ಯಮಂತ್ರಿಗಳು ತನ್ನ ಹೆಸರು ಉಳಿಸಿಕೊಳ್ಳಲು ರೇವಣ್ಣ ಹೆಸರು ಡ್ಯಾಮೇಜ್ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ರಾಜ್ಯದಲ್ಲಿ ನಡೆಯುತ್ತಿರವ ವಿದ್ಯಮಾನಗಳಿಗೆ ನೇರ ಹೊಣೆ ಮುಖ್ಯಮಂತ್ರಿಯೇ ಹೊರತು ರೇವಣ್ಣ ಅಲ್ಲ. ರಾಜಕೀಯ ಅನುಭವ ಇಲ್ಲದವರು ರೇವಣ್ಣ ಎನ್ನುತ್ತಾರೆ ಅಷ್ಟೇ. ರೇವಣ್ಣ ಅವರು ಮುಖ್ಯಮಂತ್ರಿಗಳನ್ನು ಮೀರಿ ಏನು ಮಾಡಲು ಸಾಧ್ಯ. ಹೀಗಾಗಿ ರೇವಣ್ಣ ಅವರ ಹಿಂದೆ ಮುಖ್ಯಮಂತ್ರಿಗಳು ಇದ್ದಾರೆ ಎಂದು ಸಿಎಂ ವಿರುದ್ಧ ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com