ಕುಮಾರ ಕೃಪಾ ಅಥಿತಿ ಗೃಹದಲ್ಲಿ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರದಿಂದ ಯಾವುದೇ ತಪ್ಪು ನಡೆದಿಲ್ಲ, ಬಿಜೆಪಿ ನಾಯಕರು ನಿಮ್ಮನ್ನು ಯಾಮಾರಿಸುತ್ತಿದ್ದಾರೆ. ಅವರನ್ನು ನಂಬಿ ನಿಮ್ಮ ರಾಜಕೀಯ ಜೀವನ ನೀವೇ ಹಾಳು ಮಾಡಿಕೊಳ್ಳಬೇಡಿ. ಅತೃಪ್ತ ಶಾಸಕರು ಇದನ್ನು ಅರ್ಥಮಾಡಿಕೊಳ್ಳಬೇಕು. ಇದು ನಿಮ್ಮ ಮನೆ, ನೀವೇ ಕಟ್ಟಿದ ಮನೆ, ವಾಪಸ್ ಬನ್ನಿ. ನಾವು ಯಾವುದೇ ತ್ಯಾಗಕ್ಕೂ ಸಿದ್ಧವಿದ್ದೇವೆ ಎಂದು ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಅತೃಪ್ತ ಕಾಂಗ್ರೆಸ್ ಶಾಸಕರಿಗೆ ಅವರು ಮನವಿ ಮಾಡಿದರು.