ದಿಢೀರ್ ಬೆಳವಣಿಗೆ: ರಾಜಿನಾಮೆ ಹಿಂಪಡೆಯಲು ರಾಮಲಿಂಗಾ ರೆಡ್ಡಿ ನಿರ್ಧಾರ!

ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಬಿಟಿಎಂ ಲೇಔಟ್ ಶಾಸಕರ ರಾಮಲಿಂಗಾ ರೆಡ್ಡಿ ಅವರು ದಿಢೀರ್ ಅಂತ...
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ
Updated on: 
ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಮುನಿಸಿಕೊಂಡು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಬಿಟಿಎಂ ಲೇಔಟ್ ಶಾಸಕರ ರಾಮಲಿಂಗಾ ರೆಡ್ಡಿ ಅವರು ದಿಢೀರ್ ಅಂತ ತಮ್ಮ ಮನಸ್ಸು ಬದಲಿಸಿ ರಾಜಿನಾಮೆ ಹಿಂಪಡೆಯುವ ನಿರ್ಧಾರವನ್ನು ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಒತ್ತಾಯದ ಹಿನ್ನೆಲೆಯಲ್ಲಿ ತಾವು ರಾಜಿನಾಮೆಯನ್ನು ಹಿಂಪಡೆಯುವ ನಿರ್ಧಾರ ಕೈಗೊಂಡಿರುವುದಾಗಿ ರಾಮಲಿಂಗಾ ರೆಡ್ಡಿ ಅವರು ಮಾಧ್ಯಮ ಹೇಳಿಕೆಯನ್ನು ಬಿಡುಗಡೆ ಮಾಡಿ ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ.
ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿ ನಾಳೆ ರಾಜಿನಾಮೆಯನ್ನು ಹಿಂಪಡೆಯುವುದಾಗಿ ತಿಳಿಸಿದ್ದಾರೆ. 
45 ವರ್ಷಗಳಿಂದ ಸುದೀರ್ಘ ರಾಜಕೀಯ ಜೀವನದಲ್ಲಿ ನಿಷ್ಣಾವಂತ ಕಾಂಗ್ರೆಸ್ ಕಾರ್ಯಕರ್ತನಾಗಿ, 7 ಬಾರಿ ಶಾಸಕನಾಗಿ ಪಕ್ಷದ ಶ್ರೇಯೋಭಿವೃದ್ಧಿಗಾಗಿ ಹಾಗೂ ನನ್ನ ಮತ ಕ್ಷೇತ್ರದ ಅಭಿವೃದ್ಧಿಗಾಗಿ ಮತ್ತು ಸಚಿವನಾಗಿದ್ದಂತಹ ಸಂದರ್ಭದಲ್ಲಿ ರಾಜ್ಯಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com