ನಾನು ಸಿಎಲ್ ಪಿ ನಾಯಕ, ನನ್ನ ಪಕ್ಷದ ಶಾಸಕರಿಗೆ ವಿಪ್ ನೀಡಲು ಅವಕಾಶವಿಲ್ಲವೇ: ಸಿದ್ದರಾಮಯ್ಯ

ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಪಕ್ಷಾಂತರ ಪಿಡುಗನ್ನು ಕೊನೆಗಾಣಿಸಬೇಕಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ....
ವಿಧಾನಸಭೆ ಕಲಾಪದಲ್ಲಿ ಸ್ಪೀಕರ್ ರಮೇಶ್ ಕುಮಾರ್
ವಿಧಾನಸಭೆ ಕಲಾಪದಲ್ಲಿ ಸ್ಪೀಕರ್ ರಮೇಶ್ ಕುಮಾರ್
ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಪಕ್ಷಾಂತರ ಪಿಡುಗನ್ನು ಕೊನೆಗಾಣಿಸಬೇಕಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸಭೆ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಕ್ರಿಯಾ ಲೋಪದ ಪ್ರಶ್ನೆ ಎತ್ತಿ ಮಾತನಾಡಿದ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ ಶೆಡ್ಯೂಲ್ 10ರ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹೀಗಾಗಿ ನಿಮ್ಮಿಂದ(ಸ್ಪೀಕರ್) ಕೆಲವು ಸ್ಪಷ್ಟೀಕರಣ ಬೇಕಾಗಿದೆ ಎಂದರು.
ಪಕ್ಷಾಂತರ ಪಿಡುಗು ಪ್ರಜಾಪ್ರಭುತ್ವದ ಅಡಿಗಲ್ಲನ್ನು ಅಲ್ಲಾಡಿಸುತ್ತಿದೆ. ಸಂವಿಧಾನದ ಕೆಲವು ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕಾಗಿದೆ ಎಂದು ಹೇಳಿದರು, ಕ್ರಿಯಾಲೋಪ ಎತ್ತಿ ಮಾತನಾಡುತ್ತಿದ್ದ ಸಿದ್ದರಾಮಯ್ಯ ಮಾತಿಗೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತ ಪಡಿಸಿದರು. 
ಮಾತನಾಡುವ ಭರದಲ್ಲಿ ನಾನು ವಿಪಕ್ಷ ನಾಯಕ ಎಂದ ಸಿದ್ದರಾಮಯ್ಯ, ಇದಕ್ಕೆ ಮೇಜು ಗುದ್ದಿ  ಬಿಜೆಪಿ ಸದಸ್ಯರು ಹರ್ಷ ವ್ಯಕ್ತಪಡಿಸಿದರು, ಆಗ ಮಧ್ಯ ಮಾತನಾಡಿದ ಸಿದ್ದರಾಮಯ್ಯ ನಾನು 4 ವರ್ಷ ಪ್ರತಿಪಕ್ಷ ನಾಯಕನಾಗಿದ್ದೆ ಎಂದು ಹೇಳಿದರು,.
ಪಕ್ಷಾಂತರ ನಿಷೇಧ ಕಾಯಿದೆ ಬಗ್ಗೆ ಉಲ್ಲೇಖವಿರುವ ಶೆಡ್ಯೂಲ್ 10 ಅನ್ನು ಸಂವಿಧಾನದಿಂದ ತೆಗೆದು ಹಾಕಿಲ್ಲ, ಅದಿನ್ನೂ ಅಸ್ಥಿತ್ವದಲ್ಲಿದೆ, ಅದರಂತೆ ಶಾಸಕನೊಬ್ಬನಿಗೆ ಅವನ ಪಕ್ಷ ವಿಪ್ ಕೊಡಲು ಅವಕಾಶವಿದೆ, ಆದರೆ ಇದನ್ನೂ ಉಲ್ಲಂಘಿಸಿ ಕೆಲ ಸದಸ್ಯರು ಗುಂಪಾಗಿ ಹೋಗಿದ್ದಾರೆ ಎಂದು ಸಿದ್ದಾಮಯ್ಯ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com