ಸರ್ಕಾರ ಉಳಿಸಿಕೊಳ್ಳಲು ಸಿಎಂ ಅಂತಿಮ ಹಂತದ ಕಸರತ್ತು: ರೋಷನ್ ಬೇಗ್ ಸೇರಿದಂತೆ ಹಲವು 'ಕೈ'ನಾಯಕರ ಭೇಟಿ

ಕೋಮಾದಲ್ಲಿರುವ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಕೊನೆಯ ಹಂತದ ಕಸರತ್ತು ನಡೆಸಿದ್ದಾರೆ. ಇದರ ಅಂಗವಾಗಿ ಕಾಂಗ್ರೆಸ್ ...
ರೆಸಾರ್ಟ್ ನಲ್ಲಿರುವ ಕಾಂಗ್ರೆಸ್ ಶಾಸಕರ ಭೇಟಿ ಮಾಡಿದ ಸಿಎಂ
ರೆಸಾರ್ಟ್ ನಲ್ಲಿರುವ ಕಾಂಗ್ರೆಸ್ ಶಾಸಕರ ಭೇಟಿ ಮಾಡಿದ ಸಿಎಂ
Updated on: 
ಬೆಂಗಳೂರು:  ಕೋಮಾದಲ್ಲಿರುವ ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಕೊನೆಯ ಹಂತದ ಕಸರತ್ತು ನಡೆಸಿದ್ದಾರೆ. ಇದರ ಅಂಗವಾಗಿ ಕಾಂಗ್ರೆಸ್ ಬಂಡಾಯ ನಾಯಕರನ್ನು ಭೇಟಿಯಾಗಲು ಅಂತಿಮ ಪ್ರಯತ್ನ ಮಾಡಿದ್ದಾರೆ.
ಹಿರಿಯ ಶಾಸಕ ರಾಮಲಿಂಗಾ ರೆಡ್ಜಿ ರಾಜಿನಾಮೆ ವಾಪಸ್ ಪಡೆದುಕೊಳ್ಳುವುದಾಗಿ ಕಾಂಗ್ರೆಸ್ ಮುಖಂಡರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಇದರ ಜೊತೆಗೆ ಎಐಸಿಸಿ ಮುಖಂಡರು ರೋಷನ್ ಬೇಗ್ ಅವರನ್ನು ರಾಜಿನಾಮೆ ವಾಪಸ್ ಪಡೆಯುವಂತೆ ಮನವೊಲಿಸಿದ್ದಾರೆ ಎಂದು ಹೇಳಲಾಗಿದೆ.
ಬುಧವಾರ ರಾತ್ರಿ ಪ್ರಕೃತಿ ರೆಸಾರ್ಟ್‌ಗೆ ಭೇಟಿ ನೀಡಿದ ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್‌ ಶಾಸಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಸೇರಿದಂತೆ ಇತರ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com