ಮೈತ್ರಿ ವಿರುದ್ಧ ಸಿಡಿದೆದ್ದ ಬಿಜೆಪಿ: ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ!

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿಶ್ವಾಸ ಮತಯಾಚನೆ ನಾಳೆಗೆ ಮುಂದೂಡಿದ ಹಿನ್ನೆಲೆಯಲ್ಲಿ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದು ವಿಧಾನಸೌಧದಲ್ಲೇ ಅಹೋರಾತ್ರಿ ಧರಣಿ ನಡೆಸುತ್ತಿದೆ.
ಬಿಜೆಪಿ ಶಾಸಕರು
ಬಿಜೆಪಿ ಶಾಸಕರು
Updated on: 
ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿಶ್ವಾಸ ಮತಯಾಚನೆ ನಾಳೆಗೆ ಮುಂದೂಡಿದ ಹಿನ್ನೆಲೆಯಲ್ಲಿ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ಸಿಡಿದೆದ್ದು ವಿಧಾನಸೌಧದಲ್ಲೇ ಅಹೋರಾತ್ರಿ ಧರಣಿ ನಡೆಸುತ್ತಿದೆ. 
ಮೈತ್ರಿ ಸರ್ಕಾರದ ವಿರುದ್ಧ ಅಹೋ ರಾತ್ರಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ವಿಧಾನಸಭೆ ಮೊಗಸಾಲೆಯಲ್ಲಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಭೋಜನ ಸವಿದ ಶಾಸಕರು ಮಲಗಿ ನಿದ್ರಿಸುತ್ತಿದ್ದಾರೆ. 
ಆಡಳಿತ ಪಕ್ಷದವರು ಕಾಲಾಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಆಹೋರಾತ್ರಿ ಧರಣಿಗೆ ಮುಂದಾಗಿತ್ತು. ಈ ಮಧ್ಯೆ ರಾಜ್ಯಪಾಲರು ನಾಳೆ ವಿಶ್ವಾಸ ಮತ ಸಾಬೀತು ಪಡಿಸುವಂತೆ ಸಿಎಂ ಕುಮಾರಸ್ವಾಮಿ ಅವರಿಗೆ ಆದೇಶ ನೀಡಿದ್ದು ಬಹುಮತ ಸಾಬೀತು ಪಡಿಸಬಹುದೇ ಅಥವಾ ವಿಶ್ವಾಸ ಮತ ಸಾಬೀತು ಮಡಲಾಗದೇ ವಿದಾಯ ಭಾಷಣ ಮಾಡಿ ನಿರ್ಗಮಿಸುವರೋ ಎಂಬುದೀಗ ತೀವ್ರ ಕುತೂಹಲ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com