ಗುರುವಾರ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸಾಧ್ಯತೆ

ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಗುರುವಾರ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ
ಬೆಂಗಳೂರು: ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಗುರುವಾರ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. 
ಇಂದು ರಾತ್ರಿ ಅಥವಾ ನಾಳೆ ಬೆಳಗ್ಗೆ ರಾಜ್ಯಪಾಲರನ್ನು ಯಡಿಯೂರಪ್ಪ ಭೇಟಿಯಾಗಲಿದ್ದು, ಸರ್ಕಾರ ರಚನೆಯ ಹಕ್ಕು ಮಂಡಿಸಲಿದ್ದಾರೆ. ಬಳಿಕ ರಾಜ್ಯಪಾಲರು ಸರ್ಕಾರ ರಚನೆಗೆ ಯಡಿಯೂರಪ್ಪ ಅವರನ್ನು ಆಹ್ವಾನಿಸಲಿದ್ದಾರೆ.
224 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 105  ಹಾಗೂ ಕಾಂಗ್ರೆಸ್ - ಜೆಡಿಎಸ್ 99 ಸದಸ್ಯರನ್ನು ಹೊಂದುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ಅಧಿಕಾರ ರಚನೆಯ ಹಕ್ಕು ಪಡೆದಿದ್ದು, ಯಡಿಯೂರಪ್ಪ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.
ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಯಾರು ಯಾರು ಮಂತ್ರಿಗಳಾಗಿ ಪದಗ್ರಹಣ ಮಾಡಲಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಒಬ್ಬರು ಅಥವಾ ಇಬ್ಬರು ಉಪಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com