ಪ್ರಜಾಪ್ರಭುತ್ವದ ಗೆಲುವು, ನಾಳೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಪರ್ವ: ಯಡಿಯೂರಪ್ಪ

ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ವಿಶ್ವಾಸಮತಯಾಚನೆಯಲ್ಲಿ ಸೋಲುಂಟಾಗಿರುವುದು ಪ್ರಜಾಪ್ರಭುತ್ವದ ಗೆಲುವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ.
ಪ್ರಜಾಪ್ರಭುತ್ವದ ಗೆಲುವು, ನಾಳೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಪರ್ವ: ಯಡಿಯೂರಪ್ಪ
ಪ್ರಜಾಪ್ರಭುತ್ವದ ಗೆಲುವು, ನಾಳೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಪರ್ವ: ಯಡಿಯೂರಪ್ಪ
Updated on: 
ಬೆಂಗಳೂರು: ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ವಿಶ್ವಾಸಮತಯಾಚನೆಯಲ್ಲಿ ಸೋಲುಂಟಾಗಿರುವುದು ಪ್ರಜಾಪ್ರಭುತ್ವದ ಗೆಲುವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. 
ವಿಶ್ವಾಸಮತಯಾಚನೆ ಪ್ರಕ್ರಿಯೆ ಪೂರ್ಣಗೊಂಡು ಫಲಿತಾಂಶ ಬಂದ ನಂತರ ವಿಧಾನಸೌಧದಲ್ಲಿ ಮೊದಲ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ನಾಳೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ. ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವುದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಸಿಕ್ಕ ಅತಿ ದೊಡ್ಡ ಗೆಲುವು, ರೈತರ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಬಿಜೆಪಿ ಸರ್ಕಾರ ಬರ ಪರಿಹಾರ ಕಾರ್ಯಗಳಿಗೆ ಆದ್ಯತೆ ನೀಡಲಿದೆ, ರಾಜ್ಯಕ್ಕೆ ಸ್ಥಿರ ಸರ್ಕಾರ ನೀಡಲಿದ್ದೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ. 
ನಾಳೆ ರಾಜಭವನಕ್ಕೆ ಯಡಿಯೂರಪ್ಪ
ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಸದನದಲ್ಲಿ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿ ಸರ್ಕಾರ ರಚನೆಗೆ ಸಿದ್ಧತೆ ನಡೆಸುತ್ತಿದೆ. ಬಿಜೆಪಿ ನಾಯಕ ಯಡಿಯೂರಪ್ಪ ಜು.24 ರಂದು ರಾಜಭವನಕ್ಕೆ ತೆರಳಲಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com