ನಾನು ಆರೋಪಗಳ ವಿಷ ಕುಡಿದು ವಿಷಕಂಠನಾಗಿದ್ದೇನೆ: ಇದು ಮೊದಲೂ ಅಲ್ಲ, ಕೊನೆಯೂ ಅಲ್ಲ; ಸಿದ್ದರಾಮಯ್ಯ

ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿಮಳೆ ಆಗಿವೆ. ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಂಗಳೂರು: ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ  ಸುಳ್ಳು ಆರೋಪಗಳ ಸುರಿಮಳೆ ಆಗಿವೆ. ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ, ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷಕುಡಿದು,ಕುಡಿದು ನಾನು ವಿಷಕಂಠನ್ನಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು' ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯನವರು  ನಮ್ಮ ನಾಯಕರು ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ. ಕೊನೆಗೆ ಸತ್ಯವೇ ಗೆಲ್ಲುವುದು.ಸತ್ಯಮೇವ ಜಯತೇ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com