ಜುಲೈ 1ರ ನಂತರ ಕುಮಾರಸ್ವಾಮಿ ಹೊರಡಿಸಿದ್ದ ಆದೇಶಗಳಿಗೆ ನಿಯೋಜಿತ ಸಿಎಂ ಯಡಿಯೂರಪ್ಪ ಬ್ರೇಕ್!
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನವೇ ನಿಯೋಜಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರು ಜುಲೈ 1ರಂದ ಬಳಿಕ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಹೊರಡಿಸಿದ್ದ ಆದೇಶಗಳಿಗೆ...
ಬೆಂಗಳೂರು: ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನವೇ ನಿಯೋಜಿತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರು ಜುಲೈ 1ರಂದ ಬಳಿಕ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಹೊರಡಿಸಿದ್ದ ಆದೇಶಗಳಿಗೆ ಬ್ರೇಕ್ ಹಾಕಿದ್ದಾರೆ.
ಜುಲೈ ತಿಂಗಳಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರು ಹೊರಡಿಸಿದ್ದ ಕಾಮಗಾರಿ ಹಾಗೂ ವರ್ಗಾವಣೆ ಆದೇಶಗಳಿಗೆ ತಡೆ ಹಿಡಿಯಿರಿ ಎಂದು ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ನಿಯೋಜಿತ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪತ್ರ ಬರೆದಿದ್ದಾರೆ.
ಯಡಿಯೂರಪ್ಪನವರು ಸಂಜೆ 6 ಗಂಟೆಗೆ ರಾಜಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ಈ ಹಿಂದೆ ಬಿಜೆಪಿ ಮೈತ್ರಿ ಸರ್ಕಾರದಲ್ಲಿ ವರ್ಗಾವಣೆ ದಂದೆ ನಡೆಯುತ್ತಿದೆ. ರೇವಣ್ಣನವರು ಆತುರಾತುರವಾಗಿ ವರ್ಗಾವಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿತ್ತು.