ಪದಗ್ರಹಣ ಮಾಡುತ್ತಿದ್ದಂತೆಯೇ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಖಡಕ್ ಎಚ್ಚರಿಕೆ: ಇಲ್ಲಿದೆ ವಿವರ

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಯಡಿಯೂರಪ್ಪ ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರತರಾಗಿದ್ದಾರೆ.
ಪದಗ್ರಹಣ ಮಾಡುತ್ತಿದ್ದಂತೆಯೇ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಖಡಕ್ ಎಚ್ಚರಿಕೆ: ಇಲ್ಲಿದೆ ವಿವರ
ಪದಗ್ರಹಣ ಮಾಡುತ್ತಿದ್ದಂತೆಯೇ ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಖಡಕ್ ಎಚ್ಚರಿಕೆ: ಇಲ್ಲಿದೆ ವಿವರ
ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಯಡಿಯೂರಪ್ಪ ಆಡಳಿತ ಯಂತ್ರವನ್ನು ಮತ್ತಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರತರಾಗಿದ್ದಾರೆ. 
ಸಂಜೆ ಮೊದಲ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ, ನೇಕಾರರಿಗೆ ಕೊಡುಗೆ ನೀಡುವ ಯೋಜನೆಗಳನ್ನು ಘೋಷಿಸಿದ ನಂತರ ಯಡಿಯೂರಪ್ಪ ಅಧಿಕಾರಿಗಳಿಗೂ ಖಡಕ್ ಸಂದೇಶ ರವಾನೆ ಮಾಡಿದ್ದಾರೆ. 
ಬರ ಹಾಗೂ ಮಳೆಗಾಲದ ನಿರ್ವಹಣೆ ಸಂಬಂಧ ಸಭೆ ನಡೆಸಬೇಕು, 15 ದಿನಕ್ಕೊಮ್ಮೆ ಕಡ್ಡಾಯ ಸಭೆ ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 
ಆ.2-3 ರಂದು ತಾವು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳೊಂದಿಗೆ ಸಭೆ ನಡೆಸುವುದಾಗಿ ಹೇಳಿರುವ ಸಿಎಂ ಯಡಿಯೂರಪ್ಪ ಮುಖ್ಯಕಾರ್ಯದರ್ಶಿಗಳು 2 ಬಾರಿ ಜಿಲ್ಲಾ ಪ್ರವಾಸ ಮಾಡಬೇಕೆಂದು ಸೂಚನೆ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com