ಯಡಿಯೂರಪ್ಪ ಬಹುಮತ ಸಾಬೀತು ತಡೆಗೆ ಕಾಂಗ್ರೆಸ್ ಹೊಸ ತಂತ್ರ.!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ಮಹತ್ವದ ಮಾತುಕತೆ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಮಾಜಿ ಸಚಿವ ರಾಮಲಿಂಗಾರೆಡ್ಡಿ ಆಗಮಿಸಿ ಮಹತ್ವದ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕೂತುಹಲ ಕೆರಳಿಸಿದೆ.
ಈ ಮೂಲಕ ಮುಂಬೈನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್ ಜೆಡಿಎಸ್ ಅತೃಪ್ತ ಶಾಸಕರನ್ನು ಸೆಳೆಯಲು  ಪ್ರಯತ್ನ ನಡೆದಿದೆ ಎಂಬ ಕೂತುಹಲ ಗರಿಗೆದರಿದೆ.
ಲಭ್ಯವಾಗಿರುವ  ಖಚಿತ ಮಾಹಿತಿಯ ಪ್ರಕಾರ ಎಸ್.ಟಿ.ಸೋಮಶೇಖರ್, ಭೈರತಿ, ಮುನಿರತ್ನ ಅವರನ್ನು ಮರಳಿ ಸೆಳೆಯುವ ಪ್ರಯತ್ನ ನಡೆದಿದೆ ಎನ್ನಲಾಗಿದೆ. ಜೊತೆಗೆ ಈ ಮೂವರು ಶಾಸಕರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆಯುವಂತೆ ಮನವೊಲಿಸಿ, ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನವೂ ನಡೆದಿದೆ ಎನ್ನಲಾಗಿದೆ. 
ಮೂವರು ಶಾಸಕರು ರಾಮಲಿಂಗಾರೆಡ್ಡಿ ಅವರ ಜೊತೆ ಸಂಪರ್ಕದಲ್ಲಿ ಇದ್ದಾರೆ ಎಂದೂ ಹೇಳಲಾಗುತ್ತಿದ್ದು, ಬಿಜೆಪಿ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸದಂತೆ ಅಡ್ಡಗಾಲು ಹಾಕಲು ಕಾಂಗ್ರೆಸ್ ಈ ತಂತ್ರಗಾರಿಕೆ ಮಾಡುತ್ತಿದೆ ಎಂದೂ ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com