ಪ್ರಮಾಣ ವಚನಕ್ಕೆ ಒಂದೇ ನಿಮಿಷದಲ್ಲಿ ರಾಜ್ಯಪಾಲರು ಅನುಮತಿ ನೀಡಿದ್ದು ವಿಪರ್ಯಾಸ: ಜೆಡಿಎಸ್

ಬಹುಮತದ ಸರ್ಕಾರ ರಚನೆಯ ಕುರಿತು ರಾಜ್ಯಪಾಲರು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ‌ ನೀಡಿದ್ದು ಪ್ರಜಾಪ್ರಭುತ್ವದ ..
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on: 
ಬೆಂಗಳೂರು: ಬಹುಮತದ ಸರ್ಕಾರ ರಚನೆಯ ಕುರಿತು ರಾಜ್ಯಪಾಲರು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ‌ ನೀಡಿದ್ದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಜೆಡಿಎಸ್ ಹೇಳಿದೆ.
ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇಂದು ಸಂಜೆ  ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್, ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲು ನೈತಕತೆ ಇಲ್ಲ ಎಂದು ಹೇಳಿದೆ.
ವಿಧಾನಸಭೆಯ ಸಂಖ್ಯಾಬಲ 222, ಬಹುಮತಕ್ಕೆ ಬೇಕಾಗಿರುವ ಸಂಖ್ಯಾಬಲ 112. ಆದರೆ ಬಿಜೆಪಿಯವರು ನಮಗೆ 105 ಶಾಸಕರ ಬೆಂಬಲವಿದೆ ಎಂದು‌ ಸರ್ಕಾರ ರಚನಗೆ ಹಕ್ಕು ಮಂಡಿಸಿದ್ದು ಇದಕ್ಕೆ ರಾಜ್ಯಪಾಲರು ಬಹುಮತದ ಸರ್ಕಾರ ರಚನೆಯ ಕುರಿತು ಯಾವುದೇ ಅನುಮಾನ ವ್ಯಕ್ತಪಡಿಸದೇ ಒಂದೇ ನಿಮಿಷದಲ್ಲಿ ಅನುಮತಿ‌ ನೀಡಿದ್ದು ಪ್ರಜಾಪ್ರಭುತ್ವದ ವಿರೋಧಿ ನಿರ್ಧಾರ ಎಂದು ಹೇಳಿದೆ.
ಕರ್ನಾಟಕ ಇತಿಹಾಸದಲ್ಲೇ ಇಂದು ಅತ್ಯಂತ ಕರಾಳ ದಿನ. ಬಿಜೆಪಿಯಿಂದಾಗಿ, ಪ್ರಜಾಪ್ರಭತ್ವದ ಕಗ್ಗೊಲೆಯಾಗುತ್ತಿದೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com