ಬೆಂಗಳೂರು: ಇಂದು ಸಂಜೆ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ಇಂದು ಬಿಜೆಪಿಗೆ ಸಂಖ್ಯಾಬಲ ಇಲ್ಲದ ಕಾರಣ ಯಾವುದೇ ಕಾರಣಕ್ಕೂ ಹಕ್ಕು ಮಂಡನೆಯಾಗಲಿ ಅಥವಾ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವೇ ಇಲ್ಲ. ಬಿಜೆಪಿ ಮತ್ತು ಯಡಿಯೂರಪ್ಪನವರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೂಲಭೂತ ಹಾಗೂ ಸಾಮಾನ್ಯ ಜ್ಞಾನ ಹೊಂದುವುದು ಅವಶ್ಯಕ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಟ್ವೀಟ್ ಮಾಡಿದೆ.
ಭ್ರಷ್ಟಾಚಾರದ ಆರೋಪದಲ್ಲಿ ಜೈಲು ಹಕ್ಕಿಯಾಗಿದ್ದ ಯಡಿಯೂರಪ್ಪ ತಮ್ಮ ಅಪ್ರತಿಮ ಬುದ್ಧಿ ಶಕ್ತಿ ಬಳಸಿ ಕುದುರೆ ವ್ಯಾಪಾರ ನಡೆಸಿದ್ದಾರೆ, 2008 ರಿಂದ 2011ರ ವರೆಗೆ ಸಿಎಂ ಆಗಿದ್ದ ಅವಧಿಯಲ್ಲಿ ನಡೆದ ಹಗರಣಗಳನ್ನು ಕರ್ನಾಟಕ ಜನತೆ ನೆನಪಿಸಿಕೊಳ್ಳಬೇಕು ಎಂದು ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಬರೆದುಕೊಂಡಿದೆ.
ಇವತ್ತು, ಬಿಜೆಪಿಗೆ ಸಂಖ್ಯಾಬಲ ಇಲ್ಲದ ಕಾರಣ ಯಾವುದೇ ಕಾರಣಕ್ಕೂ ಹಕ್ಕು ಮಂಡನೆಯಾಗಲಿ ಅಥವಾ ಪ್ರಮಾಣ ವಚನವಾಗಿ ಸ್ವೀಕರಿಸಲು ಸಾಧ್ಯವೇ ಇಲ್ಲ.@BJP4Karnataka ಮತ್ತು @BSYBJP ಅವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೂಲಭೂತ ಹಾಗೂ ಸಾಮಾನ್ಯ ಜ್ಞಾನ ಹೊಂದುವುದು ಅವಶ್ಯಕ. pic.twitter.com/G8N2bYq7wL