ಸೋಮವಾರ ಬಹುಮತ ಸಾಬೀತು ನಿಶ್ಚಿತ; ಪ್ರಹ್ಲಾದ್ ಜೋಷಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಬಹುಮತ ಸಾಬೀತುಪಡಿಸುವುದು ನಿಶ್ಚಿತ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ..
ಪ್ರಹ್ಲಾದ್ ಜೋಷಿ
ಪ್ರಹ್ಲಾದ್ ಜೋಷಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಬಹುಮತ ಸಾಬೀತುಪಡಿಸುವುದು ನಿಶ್ಚಿತ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ರೈತಪರ ಹೋರಾಟ ಪ್ರಶ್ನಾತೀತ. ಮೊದಲ ಸಂಪುಟ ಸಭೆಯಲ್ಲೇ ರೈತರ ಪರ ನಿಲುವು ಕೈಗೊಳ್ಳುವ ಮೂಲಕ ಸರ್ಕಾರದ ಆದ್ಯತೆಯನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್‍ ಜೊತೆ ಚರ್ಚಿಸಿದ ಬಳಿಕ ಅಂತಿಮವಾಗಲಿದೆ ಎಂದು ತಿಳಿಸಿದರು.
ರಾಜ್ಯದ ಜನರಿಗೆ ಸುಭದ್ರ, ರೈತ, ಜನಪರ ಸರ್ಕಾರವನ್ನು ನೀಡುವುದು ಬಿಜೆಪಿ ಪಕ್ಷದ ಉದ್ದೇಶ ವಾಗಿದೆ. ಉತ್ತಮ ಆಡಳಿತವನ್ನು ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ನೀಡಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com