ಜೈಪಾಲ್ ರೆಡ್ಡಿ ನಿಧನಕ್ಕೆ ಸಂತಾಪ ಸೂಚಿಸಿದ ಸ್ಪೀಕರ್
ರಾಜಕೀಯ
ಮಾಜಿ ಕೇಂದ್ರ ಸಚಿವ ಜೈಪಾಲ್ ರೆಡ್ಡಿ ನಿಧನಕ್ಕೆ ಸಂತಾಪ ಸೂಚಿಸಿದ ಸ್ಪೀಕರ್
ಇಂದು ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಜೈಪಾಲ್ ರೆಡ್ಡಿ ಅವರಿಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಸಂತಾಪ ಸೂಚಿಸಿದರು.
ಬೆಂಗಳೂರು: ಇಂದು ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಜೈಪಾಲ್ ರೆಡ್ಡಿ ಅವರಿಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಸಂತಾಪ ಸೂಚಿಸಿದರು.
ಅತೃಪ್ತ ಶಾಸಕರ ಅನರ್ಹತೆ ವಿಚಾರ ಇತ್ಯರ್ಥ ಪಡಿಸಲು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ಅವರು, ಇಂದು ನಿಧನರಾದ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಜೈಪಾಲ್ ರೆಡ್ಡಿ ಅವರನ್ನು ನೆನೆದು ಕಂಬನಿ ಮಿಡಿದರು.
ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಜೈಪಾಲ್ ರೆಡ್ಡಿ ಅವರನ್ನು ನೆನೆದು ಗದ್ಗಧಿತರಾದ ರಮೇಶ್ ಕುಮಾರ್ ಅವರು, ಇದು ನನಗೆ ಅತ್ಯಂತ ಖೇದದ ದಿನ. ನನ್ನ ಹಿರಿಯ ಸೋದರರಂತಿದ್ದ ಜೈಪಾಲ್ ರೆಡ್ಡಿ ನಿಧನರಾಗಿದ್ದಾರೆ. ನನಗೆ ತೀವ್ರ ಬೇಸರವಾಗಿದೆ. ಅವರು ಒಬ್ಬ ಒಳ್ಳೆಯ ಮನುಷ್ಯ, ಸಂಸದೀಯಪಟು ಆಗಿದ್ದರು ಎಂದು ಹೇಳಿದರು.
ಅಂತೆಯೇ 'ಪಕ್ಷಾಂತರ ನಿಷೇಧ ಕಾಯ್ದೆ ಸಂಸತ್ತಿನಲ್ಲಿ ಮಂಡನೆಯಾದಾಗ ಜೈಪಾಲ್ ರೆಡ್ಡಿ ಮನದ ಮಾತುಗಳನ್ನು ಹೇಳಿದ್ದರು. ಜೈಪಾಲ್ ರೆಡ್ಡಿ ಅವರನ್ನು ನೆನೆದು ಕಣ್ಣೀರಿಟ್ಟ ಸ್ಪೀಕರ್ ರಮೇಶ್ ಕುಮಾರ್. ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಆಡ್ವಾಣಿ, ಮುಧುಲಿಮೆ, ಮೋಹನ್ ಕುಮಾರ್ ಮಂಗಳಂ, ಇಂದ್ರಜಿತ್ ಗುಪ್ತ, ಚಂದ್ರಜಿತ್ ಯಾದವ್, ಜಾರ್ಜ್ ಫರ್ನಾಂಡಿಸ್ ಅಂಥವರು ಈ ದೇಶದಲ್ಲಿ ಇದ್ರಾ ಅಂತ ನನಗೆ ಅನ್ನಿಸುತ್ತೆ ಎಂದು ಹೇಳಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ