ವಾಮಾಮಾರ್ಗದಿಂದ ಬಿಜೆಪಿ ಅಧಿಕಾರ ಹಿಡಿದಿದೆ- ಮಲ್ಲಿಕಾರ್ಜುನ ಖರ್ಗೆ

ವಾಮಾಮಾರ್ಗದಿಂದ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ವಾಮಾಮಾರ್ಗದಿಂದ ಬಿಜೆಪಿ ರಾಜ್ಯದಲ್ಲಿ  ಅಧಿಕಾರ ಹಿಡಿದಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.  
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರವನ್ನು ಪತನಗೊಳಿಸಲು 14 ತಿಂಗಳುಗಳಿಂದ ಪ್ರಯತ್ನಿಸುತ್ತಿದ್ದ ಬಿಜೆಪಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಮುಂಬೈನಲ್ಲಿಟ್ಟು, 5-6 ವೋಅಂತರದಿಂದ ಅಧಿಕಾರ ಹಿಡಿದಿದೆ ಎಂದರು.
ಗೋವಾ, ಅರುಣಾಚಲ ಪ್ರದೇಶ, ಉತ್ತರ್ ಖಂಡ್ , ಮಣಿಪುರದಲ್ಲಿಯೂ ಇದೇ ರೀತಿಯಲ್ಲಿ ಬಿಜೆಪಿ ಅಧಿಕಾರ ರಚಿಸಿದೆ.ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರಿಯಲ್ಲ, ಅನ್ಯಾಯ ಮಾಡಿದ್ದಾರೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹುಮತ ಇಲ್ಲದಿದ್ದರೂ ವಾಮಾಮಾರ್ಗದಲ್ಲಿ ಅಧಿಕಾರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷಗಳಿಗೆ ಸಹನೆ ಇರಬೇಕು , ರಾಜಕೀಯ ಪಕ್ಷಗಳಿಗೆ ಸಹನೆ ಇರದೆ ಹೋದರೆ ಹೇಗೆ ಎಂದು ಪ್ರಶ್ನಿಸಿದ ಖರ್ಗೆ, ಇದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಹೊಡೆತ ಬಿದ್ದಿದೆ.ಮುಂದಿನ ದಿನಗಳಲ್ಲಿ ಜನರೇ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com