ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮೂವರು ರೆಬೆಲ್ ಶಾಸಕರು

ಸ್ಪೀಕರ್ ರಮೇಶ್ ಕುಮಾರ್ ಅವರು ಅನರ್ಹತೆಗೊಳಿಸಿದ ಆದೇಶವನ್ನು ಪ್ರಶ್ನಿಸಿ ಮೂವರು ರೆಬೆಲ್ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ..
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
Updated on
ಬೆಂಗಳೂರು:  ಸ್ಪೀಕರ್ ರಮೇಶ್ ಕುಮಾರ್ ಅವರು ಅನರ್ಹತೆಗೊಳಿಸಿದ ಆದೇಶವನ್ನು ಪ್ರಶ್ನಿಸಿ ಮೂವರು ರೆಬೆಲ್ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ
ರೆಬೆಲ್ ಶಾಸಕರಾದ ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿ, ಆರ್.ಶಂಕರ್ ಅವರು ಸ್ಪೀಕರ್ ಆದೇಶ ಪ್ರಶ್ನಿಸಿ ಇಂದು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಸಂಬಂಧ ಇಂದು ವಿಚಾರಣೆ ನಡೆಯುವ ಸಾಧ್ಯತೆ ಇಲ್ಲ. ಹೀಗಾಗಿ ಮಂಗಳವಾರ ಇಲ್ಲವೇ ಬುಧವಾರ ವಿಚಾರಣೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಮೂವರು ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅವರು ಜುಲೈ 23ರಂದು ಅನರ್ಹಗೊಳಿಸಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿರುವ ರೆಬೆಲ್ ಶಾಸಕರು, ಸುಮಾರು ದಿನಗಳಿಂದ ಹಾಗೇ ಉಳಿದಿದ್ದ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಇತ್ಯರ್ಥ ಮಾಡಿದ್ದಾರೆ. ಸ್ಪೀಕರ್ ರಮೇಶ್ ಕುಮಾರ್ ಅವರು ಅನರ್ಹತೆ ಮಾಡಲು ಏಕಾಏಕಿ ನಿರ್ಧಾರ ಕೈಗೊಂಡಿದ್ದಾರೆ. ದ್ವೇಷದಿಂದ ಹೀಗೆ ಮಾಡಿದ್ದು ಸರಿಯಲ್ಲ. ಈ ಸಂಬಂಧ ಸೂಕ್ತ ನ್ಯಾಯ ಒದಗಿಸಬೇಕು ಎಂದು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com