ಪಕ್ಷ ಸಂಘಟನೆ ಕೊರತೆ: 24 ಬ್ಲಾಕ್ ಕಾಂಗ್ರೆಸ್ ಸಮಿತಿಗಳನ್ನು ವಿಸರ್ಜಿಸಿದ ಕೆಪಿಸಿಸಿ

ಪಕ್ಷ ಸಂಘಟನೆ ಮಾಡದ 24 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ವಜಾಗೊಳಿಸಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ. ವೈ. ಘೋರ್ಪಡೆ, ಈ ಬ್ಲಾಕ್ ಸಮಿತಿಗಳನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಪಕ್ಷ ಸಂಘಟನೆ ಮಾಡದ 24 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ವಜಾಗೊಳಿಸಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ. ವೈ. ಘೋರ್ಪಡೆ, ಈ ಬ್ಲಾಕ್ ಸಮಿತಿಗಳನ್ನು ವಿಸರ್ಜಿಸಿ ಆದೇಶ ಹೊರಡಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು , ಜಿಲ್ಲಾ ಕಾಂಗ್ರೆಸ್ ಸಮಿತಿಯೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಸಹಕರಿಸುತ್ತಿಲ್ಲ.ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲಿ ಯಾವುದೇ ರೀತಿಯಲ್ಲಿ ಪಕ್ಷ ಬಲವರ್ದನೆ ಕೆಲಸ ಕಾರ್ಯಗಳಲ್ಲಿ ಪಾಲ್ಗೊಳ್ಳದಿರುವ ಬಗ್ಗೆ ದೂರು  ಬಂದಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಆದೇಶದ ಮೇರೆಗೆ 24 ಬ್ಲಾಕ್  ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನು  ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ
ಬ್ಲಾಕ್ ಕಾಂಗ್ರೆಸ್ ಸಮಿತಿಗಳ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿಗಳನ್ನು ಕೂಡಾ ವಿಸರ್ಜಿಸಲಾಗಿದೆ ಎಂದು ಘೋರ್ಪಡೆ ತಿಳಿಸಿದ್ದಾರೆ.
ಅಥಣಿ, ತಲಸಂಗ, ಗೋಕಾಕ ನಗರ, ಗೋಕಾಕ ಗ್ರಾಮಾಂತರ, ಯಲ್ಲಾಪುರ, ಮುಂಡಗೋಡ, ಹಿರೇಕೆರೂರು, ರಟ್ಟಿಹಳ್ಳಿ, ಹೊಸಪೇಟೆ, ಕಮಲಾಪುರ, ಚಿಕ್ಕಬಳ್ಳಾಪುರ, ಮಂಚೇನಹಳ್ಳಿ. ಕೆ. ಆರ್ ಪುರ, ಉದಯನಗರ, ಹಾರೋಹಳ್ಳಿ, ಕೆಂಗೇರಿ, ಆರ್ ಆರ್ ನಗರ, ಯಶವಂತಪುರ, ಸಂಪಂಗಿರಾಮನಗರ. ಭಾರತೀನಗರ, ಹೊಸಕೋಟೆ ನಗರ, ಸೊಲಿಬೆಲೆ ನಂದಗುಡಿ, ಜಡಿಗೇನಹಳ್ಳಿ, ಅನುಗೊಂಡನಹಳ್ಳಿ ಬ್ಲಾಕ್ ಕಾಂಗ್ರೆಸ್ ಸಮಿತಿಗಳನ್ನು ವಿಸರ್ಜಿಸಿ ಅದರ ಅಧ್ಯಕ್ಷರನ್ನು ವಜಾಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com